ರೋಣ: ‘ಪ್ರವಾಸೋದ್ಯಮ ಸಚಿವರಾಗಿ ಎಚ್.ಕೆ. ಪಾಟೀಲ ನೇಮಕವಾದ ಮೇಲೆ ಜಿಲ್ಲೆಯ ಪ್ರವಾಸೋಧ್ಯಮ ಮತ್ತು ಪಾರಂಪರಿಕ ತಾಣಗಳ ಅಭಿವೃದ್ಧಿಗೆ ಸಾಕಷ್ಟು ವೇಗ ದೊರಕಿದೆ. ಪಟ್ಟಣದ ಎಲ್ಲ ಪ್ರಾಚೀನ ದೇಗುಲಗಳ ಅಭಿವೃದ್ಧಿ ಹಾಗೂ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ಜಿಲ್ಲಾಡಳಿತ ಗದಗ, ಜಿಲ್ಲಾ ಪಂಚಾಯಿತಿ ಗದಗ, ಪ್ರವಾಸೋದ್ಯಮ ಇಲಾಖೆ ಬೆಂಗಳೂರು, ಪುರಾತತ್ವ ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಮೈಸೂರು ವತಿಯಿಂದ ₹4.50 ಕೋಟಿ ವೆಚ್ಚದಲ್ಲಿ ರೋಣ ಪಟ್ಟಣದ ಪ್ರಾಚೀನ ದೇಗುಲಗಳ ಪುನರ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ರಾಜ್ಯ ಸರ್ಕಾರ ಜಿಲ್ಲೆಯ ಐತಿಹಾಸಿಕ ಗ್ರಾಮ ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ತಾಣವಾಗಿ ಮಾಡುವಲ್ಲಿ ಯಶಸ್ವಿಯಾಗಿದೆ. ಜೊತೆಗೆ ಪಟ್ಟಣದಲ್ಲಿರುವ ರಾಮಲಿಂಗೇಶ್ವರ ದೇವಸ್ಥಾನ, ಅನಂತಶಯನ ದೇವಸ್ಥಾನ ಹಾಗೂ ತೋಟದ ಭಾವಿ ಪುನರ್ ನಿರ್ಮಾಣ ಕಾಮಗಾರಿಗೆ ಈಗಾಗಲೇ ಚಾಲನೆ ನೀಡಲಾಗಿದೆ. ಲೋಕನಾಥ ದೇವಾಲಯ, ಹಕಾರಿ ಓಣಿಯ ಈಶ್ವರ ದೇವಸ್ಥಾನದ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದ್ದು, ಹಂತ ಹಂತವಾಗಿ ಕಾಮಗಾರಿ ಆರಂಭಿಸಲಾಗುವುದು’ ಎಂದು ತಿಳಿಸಿದರು.

ತಾಲ್ಲೂಕಿನ ಸೂಡಿ ಗ್ರಾಮದ ಜೋಡು ಕಳಸದ ದೇವಸ್ಥಾನ ₹1.25 ಕೋಟಿ, ನಾಗರಬಾವಿಗೆ ₹1.50 ಕೋಟಿ ವೆಚ್ಚದ ಪುನರ್ ನಿರ್ಮಾಣ ಕಾಮಗಾರಿ ಅಂತಿಮ ಹಂತದಲ್ಲಿದೆ. ಅಭಿವೃದ್ಧಿ ಕಾರ್ಯದಲ್ಲಿ ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡದೆ ಅವಕಾಶ ಹಾಗೂ ಅನುದಾನ ಹಂಚಿಕೆ ಆಧಾರದ ಮೇಲೆ ಯೋಜನೆ ರೂಪಿಸಲಾಗುತ್ತಿದೆ ಎಂದರು.

ಪುರಾತತ್ವ ಇಲಾಖೆಯ ಅಧಿಕಾರಿ ಶ್ರೀನಿವಾಸಗೌಡ ಮಾತನಾಡಿ, ‘ರಾಮಲಿಂಗೇಶ್ವರ ದೇವಸ್ಥಾನ, ಅನಂತಶಯನ ದೇವಸ್ಥಾನ ಹಾಗೂ ತೋಟದ ಬಾವಿಗಳ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಪುನರ್ ನಿರ್ಮಾಣ ಕಾಮಗಾರಿ ನಡೆಸಲಾಗುವುದು’ ಎಂದರು.

ಈ ವೇಳೆ ಕೆಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಐ.ಎಸ್. ಪಾಟೀಲ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ ಪಾಟೀಲ, ಬಸವರಾಜ ನವಲಗುಂದ, ಪರಶುರಾಮಪ್ಪ ಅಳಗವಾಡಿ, ಶಿವಣ್ಣ ನವಲಗುಂದ, ಗುರುರಾಜ ಕುಲಕರ್ಣಿ, ವಿ.ಬಿ. ಸೋಮನಕಟ್ಟಿಮಠ, ಗದಿಗೆಪ್ಪ ಕಿರೇಸೂರ, ದಾವಲಸಾಬ್ ಬಾಡಿನ, ಮಲ್ಲಿಕ್ ಯಲಿಗಾರ, ಶಫೀಕ್ ಮೂಗನೂರ, ಮಹೇಶ ಕಳಸಣ್ಣವರ, ಅಸ್ಲಾಂ ಕೊಪ್ಪಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-23-418545307

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.