ರೋಣ: ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನ ಹೆಸರು ಬಿತ್ತನೆ ಕಾರ್ಯ ಚುರುಕುಗೊಂಡಿದ್ದು ಮಾರಾಟಗಾರರು ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡುತ್ತಿದ್ದಾರೆ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ರೋಣ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸೋಮವಾರ ರೈತರು ಮನವಿ ಸಲ್ಲಿಸಿದರು.

ಡೀಸೆಲ್ ದರ ಏರಿಕೆ, ಕಳಪೆ ಗುಣಮಟ್ಟದ ಹೆಸರು ಬಿತ್ತನೆ ಬೀಜ, ಕೃಷಿ ಯಂತ್ರೋಪಕರಣಗಳ ಬಾಡಿಗೆ ಹೆಚ್ಚಳ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಒಳಗಾಗಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆದಂತೆ ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ ಮಾಡುತ್ತಿದ್ದಾರೆ. 2 ಚೀಲ ಗೊಬ್ಬರಕ್ಕೆ ಲಿಂಕ್ ಗೊಬ್ಬರವಾಗಿ ನ್ಯಾನೋ ಯೂರಿಯಾವನ್ನು ಬೇಡವೆಂದರೂ ನೀಡುತ್ತಿದ್ದಾರೆ. ಗೊಬ್ಬರ ಖರೀದಿಯ ರಸೀದಿ ಕೊಡದೆ ಮೋಸ ಮಾಡುತ್ತಿದ್ದಾರೆ. ಕೃಷಿ ಇಲಾಖೆ ಅಧಿಕಾರಿಗಳು ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ಎಸ್.ಜಿ.ಕರಲಿಂಗಣ್ಣವರ, ಎಂ.ಬಿ.ಬ್ಯಾಳಿ, ಕೆ.ಸಿ.ಲಿಂಗನಗೌಡ್ರ, ಎಂ.ಎನ್.ಕಳಸಣ್ಣವರ, ಎಂ.ಎ.ಗಾಣಿಗೇರ, ಶಿವನಗೌಡ ಹಾವನಗೌಡ್ರ, ಎನ್.ಎಂ.ದೇಶಣ್ಣವರ, ಮಲ್ಲಪ್ಪ ಬ್ಯಾಳಿ, ಬಸಪ್ಪ ಚವಡಿ, ಎಸ್.ಎಸ್.ಚನ್ನಪ್ಪಗೌಡ್ರ, ಬಿ.ಎಸ್.ಗದಗೀನ, ಎಸ್.ಎಸ್.ಮಾಮನಿ, ಆರ್.ಪಿ.ರೊಟ್ಟಿ ಸೇರಿದಂತೆ ಅನೇಕ ರೈತರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-23-1163623689

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.