ರೋಣ: ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಹಲವಾರು ಮಹಿಳೆಯರು ವಿವಿಧ ರೀತಿಯಲ್ಲಿ ಉಪಯೋಗಿಸಿ ಮಾದರಿಯಾಗಿದ್ದಾರೆ. ತಾಲ್ಲೂಕಿನ ಕೊತಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಸದಸ್ಯೆಯರು ತಮಗೆ ಬಂದ ಗೃಹಲಕ್ಷ್ಮಿ ಯೋಜನೆಯ ಹಣದಲ್ಲಿ ಸ್ಕೂಲ್ ಬ್ಯಾಗ್ ಖರೀದಿಸಿ ಶಾಲೆಯ ಮಕ್ಕಳಿಗೆ ಉಚಿತವಾಗಿ ವಿತರಿಸಿದ್ದಾರೆ.

ಶಾಲೆ ಆರಂಭವಾದ ಮೊದಲ ದಿನ ಎಸ್ಡಿಎಂಸಿ ಸದಸ್ಯೆಯರಾದ ರೇಖಾ ಕೋಡಿಕೊಪ್ಪದ, ಹುಲಿಗೆವ್ವ ಪಾಟೀಲ, ಸುವರ್ಣಾ ಅಸೂಟಿ, ಮಂಜುಳಾ ಮಾದರ, ಮಂಜುಳಾ ಚಂದರಗಿ, ವಿಜಯಲಕ್ಷ್ಮಿ ವಸ್ತ್ರದ, ರೇಣುಕಾ ಅವಾರಿ, ನಾಗರತ್ನಾ ಚವಡಿ, ಯಶೋದಾ ಸಂದಿಮನಿ, ಗಿರಿಜಾ ಗಡಾದ ಗೃಹಲಕ್ಷ್ಮಿ ಯೋಜನೆಯ ಹಣದಿಂದ 50 ಬ್ಯಾಗ್ಗಳನ್ನು ವಿತರಣೆ ಮಾಡಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯದ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಲಿ ಎನ್ನುವ ನಿಟ್ಟಿನಲ್ಲಿ ತಮಗೆ ಬಂದ ಗೃಹಲಕ್ಷ್ಮೀ ಹಣದಲ್ಲಿ ಗುಣಮಟ್ಟದ ಬ್ಯಾಗ್ಗಳನ್ನು ವಿತರಣೆ ಮಾಡಿರುವುದು ನಿಜಕ್ಕೂ ಹೆಮ್ಮೆಯ ವಿಚಾರ’ ಎಂದು ಶಾಲಾ ಶಿಕ್ಷಣ ಇಲಾಖೆಯ ಗದಗ ಜಿಲ್ಲಾ ಉಪ ನಿರ್ದೇಶಕ ಆರ್.ಎಸ್.ಬುರಡಿ ಮಹಿಳೆಯರ ಕಾರ್ಯವನ್ನು ಶ್ಲಾಘಿಸಿದರು. ಮಹಿಳೆಯರ ಮಾದರಿ ಕಾರ್ಯಕ್ಕೆ ಕೊತಬಾಳ ಗ್ರಾಮದ ಅಡವಿಸಿದ್ದೇಶ್ವರ ಮಠದ ಶ್ರೀಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ಯೋಜನೆಯ ರೂವಾರಿಗಳಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲೆ ತಮ್ಮ ಪ್ರೀತಿ ವಿಶ್ವಾಸ ಹೀಗೆ ಮುಂದುವರಿಯಲಿ ಎಂದು ಬಯಸುತ್ತೇವೆ’ ಎಂದು ಶಾಸಕ ಜಿ.ಎಸ್.ಪಾಟೀಲ ಎಸ್ಡಿಎಂಸಿ ಸದಸ್ಯರಿಗೆ ಅಭಿನಂದನೆ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-23-1805258692

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.