ರೋಣ: ಪಟ್ಟಣದ ಜಿಗಳೂರ ರಸ್ತೆಯಲ್ಲಿರುವ ಮೆಹಬೂಬ್ ಭಾಷಾಸಾಬ್ ಮುಲ್ಲಾ ಅವರ ಶೆಡ್ನಲ್ಲಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ದಾಸ್ತಾನು ಮೇಲೆ ಮಂಗಳವಾರ ಆಹಾರ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 14 ಕ್ವಿಂಟಲ್ ಪಡಿತರ ಅಕ್ಕಿ ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ರೋಣ ಆಹಾರ ನಿರೀಕ್ಷಕಿ ಸುವರ್ಣಾ ಜುಮ್ಮನಕಟ್ಟಿ ನೇತೃತ್ವದಲ್ಲಿ ಸೋಮವಾರ ತಡರಾತ್ರಿ 12 ಘಂಟೆ ಸುಮಾರಿಗೆ ಪಟ್ಟಣದ ಜಿಗಳೂರ ರಸ್ತೆಯಲ್ಲಿರುವ ಮೆಹಬೂಬ್ ಭಾಷಾಸಾಬ್ ಮುಲ್ಲಾ ಅವರ ಶೆಡ್ನಲ್ಲಿ ಅಕ್ರಮವಾಗಿ ಸಂಗ್ರಹಿದ್ದ ಅಕ್ಕಿ ದಾಸ್ತಾನಿನ ಮೇಲೆ ದಾಳಿ ನಡೆಸಲಾಗಿತ್ತು ಎಂದು ತಿಳಿದು ಬಂದಿದೆ.

ದಾಳಿಯಲ್ಲಿ 45 ಕೆಜಿಯ 35 ಪ್ಯಾಕೆಟ್ಗಳಲ್ಲಿ ಸಂಗ್ರಹಿಸಿದ್ದ ಅಂದಾಜು ₹31,500 ಮೌಲ್ಯದ 14 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ರೋಣ ಪೊಲೀಸ್ ಠಾಣೆಗೆ ಸಾರ್ವಜನಿಕ ವಿತರಣಾ ವ್ಯವಸ್ಥೆ ನಿಯಂತ್ರಣ ಕಾಯ್ದೆ ಅಡಿ ದೂರು ನೀಡಲಾಗಿದ್ದು ಪಿಎಸ್ಐ ವ್ಹಿ.ಎಸ್.ಚವಡಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-23-1453285898

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.