ರೋಣ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಆಡಳಿತ ಅಧಿಕಾರಿ ನಂದಾ ಹಣಬರಟ್ಟಿ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಚಂದ್ರಶೇಖರ ಕಂದಕೂರ ಅಧಿಕಾರಿಗಳಿಂದ ಮಾಹಿತಿ ಪಡೆದರು.
ತಾಲ್ಲೂಕಿನ ನೈನಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಇಲಾಖೆಯ ನಿಯಮದ ಪ್ರಕಾರ ನಡೆಯುತ್ತಿಲ್ಲ. ಸ್ಥಳೀಯ ರಾಜಕೀಯ ಒತ್ತಡಕ್ಕೆ ಮಣಿಯದೆ ಇಲಾಖೆಯ ನಿಯಮದ ಪ್ರಕಾರ ಕೆಲಸ ನಿರ್ವಹಿಸಿ
ಚಂದ್ರಶೇಖರ ಕಂದಕೂರ ಇಒ ರೋಣ
ನೋಟಿಸ್ ಜಾರಿಗೆ ಶಿಫಾರಸು
‘ಸಭೆಗೆ ಗೈರು ಹಾಜರಾದ ಸಿಡಿಪಿಒ ಎಂ.ಆರ್.ಬಿ.ಸಿ ಪಿ.ಎಂ.ಜಿ.ಎಸ್.ವೈ ನೀರಾವರಿ ಇಲಾಖೆ ಕೈಗಾರಿಕೆ ನಿಗಮ ಸಣ್ಣ ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಆಯಾ ಇಲಾಖೆಗಳ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು’ ಎಂದು ರೋಣ ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ನಂದಾ ಹಣಬರಟ್ಟಿ ತಿಳಿಸಿದರು.