ರೋಣ: ಸರ್ಕಾರಿ ಸೌಲಭ್ಯಗಳನ್ನು ವಿತರಿಸುವ ಸಂದರ್ಭದಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾಜಿ ದೇವದಾಸಿಯರಿಗೆ ಆದ್ಯತೆ ನೀಡುವಂತೆ ಆಗ್ರಹಿಸಿ ವಿಮುಕ್ತ ದೇವದಾಸಿ ಮಹಿಳಾ ವೇದಿಕೆ ವತಿಯಿಂದ ರೋಣ ತಹಶೀಲ್ದಾರ್ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ವಿಮುಕ್ತ ದೇವದಾಸಿ ಮಹಿಳಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಅಭಿಷೇಕ ಕೊಪ್ಪದ, ‘ದಶಕಗಳಿಂದ ಶೋಷಣೆಗೆ ಒಳಗಾಗಿರುವ ದೇವದಾಸಿಯರು ಇಂದಿಗೂ ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿಲ್ಲ. ಕಡುಬಡತನ, ಸಾಮಾಜಿಕ ಅಸಮಾನತೆ ನಡುವೆ ಬದುಕುತ್ತಿದ್ದಾರೆ. ಮಾಜಿ ದೇವದಾಸಿಯರ ಶ್ರೇಯೋಭಿವೃದ್ಧಿಗಾಗಿ ಸರ್ಕಾರವು ವಸತಿ, ಪಡಿತರ ಚೀಟಿ, ಸಾಮಾಜಿಕ ಪಿಂಚಣಿ ಸೌಲಭ್ಯಗಳನ್ನು ತಕ್ಷಣ ನೀಡಬೇಕು’ ಎಂದು ಒತ್ತಾಯಿಸಿದರು.

‘ಸರ್ಕಾರದ ವಿವಿಧ ನಿಗಮಗಳ ಮೂಲಕ ಸ್ವಯಂ ಉದ್ಯೋಗ ಕೈಗೊಳ್ಳಲು ನೀಡುವ ಸಾಲ ಸೌಲಭ್ಯದಲ್ಲಿ ಮಾಜಿ ದೇವದಾಸಿಯರ ಮಕ್ಕಳಿಗೆ ಆದ್ಯತೆ ನೀಡಬೇಕು. ಜಮೀನು ರಹಿತರಿಗೆ ಭೂಮಿಯ ಹಕ್ಕುಪತ್ರ ವಿತರಿಸಬೇಕು. ಸೌಲಭ್ಯ ಕೋರಿ ಸಲ್ಲಿಕೆಯಾಗುವ ಈ ಸಮುದಾಯದವರ ಅರ್ಜಿಗಳನ್ನು ಸಾಮಾನ್ಯ ಅರ್ಜಿಗಳೆಂದು ಪರಿಗಣಿಸಬಾರದು. ವಿಶೇಷ ಘಟಕ ಯೋಜನೆ ಅಡಿ ತಕ್ಷಣ ವಿಲೇವಾರಿ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು’ ಎಂದು ಆಗ್ರಹಿಸಿದರು.

ವೇದಿಕೆಯ ಪದಾಧಿಕಾರಿಗಳಾದ ಗೌರವ್ವ ಹಿರೇಮನಿ, ಸಿದ್ದವ್ವ ಮಾದರ, ಮಂಜುಳಾ ತೆಗ್ಗಿನಮನಿ, ಯಲ್ಲವ್ವ ತೆಗ್ಗಿನಮನಿ, ಮುದಕವ್ವ ಕೊತಬಾಳ, ಯಲ್ಲಮ್ಮ ಚಲವಾದಿ, ರೇವಪ್ಪ ಕೆಂಗರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-23-375169763

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.