ರೋಣ: ‘ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಯೋಧರ ಜೀವನ ಇಂದಿನ ಯುವ ಪೀಳಿಗೆಗೆ ಆದರ್ಶ. ಪ್ರತಿಯೊಬ್ಬ ವ್ಯಕ್ತಿಯು ದೇಶದ ಋಣ ತೀರಿಸಲು ಪ್ರಯತ್ನಿಸಬೇಕು’ ಎಂದು ಬಿಜೆಪಿ ಯುವ ಮುಖಂಡ ಉಮೇಶಗೌಡ ಪಾಟೀಲ ಹೇಳಿದರು.

ತಾಲ್ಲೂಕಿನ ಹುಲ್ಲೂರು ಗ್ರಾಮದ ವೆಂಕನಗೌಡ ಕೆಂಚನಗೌಡ್ರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ವೆಂಕನಗೌಡ ಕೆಂಚನಗೌಡ್ರ ಅವರ 15ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ರೋಣ ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ದಶರಥ ಗಾಣಿಗೇರ ಮಾತನಾಡಿ, ‘ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ವೆಂಕನಗೌಡರು ನಮ್ಮ ಗ್ರಾಮದಲ್ಲಿ ಹುಟ್ಟಿ ಬೆಳೆದಿದ್ದು ನಮ್ಮೆಲ್ಲರ ಹೆಮ್ಮೆಯ ಸಂಗತಿ’ ಎಂದರು.

ಕಾರ್ಯಕ್ರಮದಲ್ಲಿ ಬಸವಾನಂದ ಸ್ವಾಮೀಜಿ, ರವೀಂದ್ರನಾಥ ದೊಡ್ಡಮೇಟಿ, ಸಿ.ಕೆ. ಹೆರಕಲ್, ವೆಂಕಣ್ಣ ಬಂಗಾರಿ, ಎಚ್.ಬಿ. ಜಂಗಣ್ಣವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-23-261966625

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.