ರೋಣ: ತಾಲ್ಲೂಕಿನ ಬಾಸಲಾಪೂರ, ಹಿರೇಮಣ್ಣೂರು, ಸಂದಿಗವಾಡ, ಹಾಗೂ ಡ.ಸ. ಹಡಗಲಿ ಗ್ರಾಮಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್.ಎಸ್ ಅವರು ಮಂಗಳವಾರ ಭೇಟಿ ನೀಡಿ, ಜಲ ಜೀವನ್ ಮಿಷನ್ ಹಾಗೂ ಬಹು ಗ್ರಾಮ ಕುಡಿಯುವ ನೀರು ಯೋಜನೆ ಕಾಮಗಾರಿ ಪರಿಶೀಲಿಸಿದರು.

ಗ್ರಾಮಸ್ಥರೊಂದಿಗೆ ಕುಡಿಯುವ ನೀರು ಪೂರೈಕೆ ಗುಣಮಟ್ಟ, ಸಮಸ್ಯೆ ಮತ್ತು ಸವಾಲುಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಗ್ರಾಮಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಅವರು, ಜೆಜೆಎಂ ಕಾಮಗಾರಿ ಸಂಪರ್ಕಗಳ ಗುಣಮಟ್ಟ, ಮೀಟರ್ ಅಳವಡಿಕೆ, ರಸ್ತೆ ಪುನಶ್ಚೇತನ, ನೀರಿನ ಗುಣಮಟ್ಟ, ಗ್ರಾಮೀಣ ನೀರು ಮತ್ತು ನೈರ್ಮಲ್ಯ ಸಮಿತಿಗಳ ಕಾರ್ಯ ನಿರ್ವಹಣೆ ಕುರಿತು ವಿವರವಾದ ಪರಿಶೀಲನೆ ನಡೆಸಿದ ಅವರು, ಕಾಮಗಾರಿ ಪೂರ್ಣಗೊಂಡ ನಂತರ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಗುರಿ ಜಿಲ್ಲಾ ಪಂಚಾಯಿತಿ ಹೊಂದಿದೆ ಎಂದು ಗ್ರಾಮಸ್ಥರಿಗೆ ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಭಾರ ಕಾರ್ಯಪಾಲಕ ಎಂಜಿನಿಯರ್ ರಾಘವೇಂದ್ರ ದೊಡ್ಡಮನಿ, ಸಹಾಯಕ ಎಂಜಿನಿಯರ್ ಮಹದೇವಪ್ಪ ಹೊಸಮನಿ, ಪವನ ಪವಾರ, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಚಂದ್ರಕಾಂತ ನೇರಲೇಕರ್, ಸಹಾಯಕ ಎಂಜಿನಿಯರ್ ಶರಣಬಸವ ಎಸ್.ಎಸ್, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.