ರೋಣ: ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಭಾನುವಾರ ನಡೆದ ಟಾಸ್ಕ್ಫೋರ್ಸ್ ತುರ್ತು ಸಭೆಯಲ್ಲಿ ಪಂಚಾಯಿತಿ ಅಧಿಕಾರಿಗಳು ಹಾಗೂ ನೀರು ಪೂರೈಕೆ ಏಜೆನ್ಸಿಗಳ ಪ್ರತಿನಿಧಿಗಳು ಪರಸ್ಪರ ಆರೋಪ– ಪ್ರತ್ಯಾರೋಪ ಮಾಡಿದ್ದರಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಬೇಸಿಗೆಯಲ್ಲಿ ತಾಲ್ಲೂಕಿನಾದ್ಯಂತ ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವು ಮತ್ತು ಬಿಸಿ ಗಾಳಿಯಿಂದ ರಕ್ಷಣೆಗಾಗಿ ತೆಗೆದುಕೊಂಡ ಕ್ರಮಗಳ ವಿಚಾರವಾಗಿ ಸಭೆ ಆಯೋಜಿಸಲಾಗಿತ್ತು.

ಸಭೆಯಲ್ಲಿ ಪಾಲ್ಗೊಂಡಿದ್ದ ರೋಣ ಮತ್ತು ಗಜೇಂದ್ರಗಡ ತಾಲ್ಲೂಕುಗಳ ಹಲವು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಕುರಿತು ಶಾಸಕ ಜಿ.ಎಸ್. ಪಾಟೀಲ ಅವರು ಪ್ರಶ್ನಿಸಿದರು. ‘ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿ (ಡಿಬಿಒಟಿ) ನಿಗದಿಪಡಿಸಿದ ಪ್ರಮಾಣದಷ್ಟು ನೀರು ದೊರೆಯುತ್ತಿಲ್ಲ’ ಎಂದು ಬಹುತೇಕ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಆರೋಪ ಮಾಡಿದರು.

‘ನೀರು ಸರಿಯಾಗಿ ಪೂರೈಕೆ ಆಗದಿರುವುದಕ್ಕೆ ಕೆಲವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ವಾಟರ್ಮನ್ಗಳು ಕಾರಣ. ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೀರು ಬಳಸುತ್ತಿದ್ದಾರೆ’ ಎಂದು ನೀರು ಪೂರೈಕೆ ಏಜೆನ್ಸಿಗಳ ಪ್ರತಿನಿಧಿಗಳು ಪ್ರತ್ಯಾರೋಪ ಮಾಡಿದರು.

‘ಬಹುತೇಕ ಎಲ್ಲ ಗ್ರಾಮಗಳಲ್ಲಿ ನೀರಿನ ಕೊರತೆ ಉಂಟಾಗಿದ್ದು, ಹೆಚ್ಚುವರಿ ನೀರು ಎಲ್ಲಿ ಹೋಯಿತು’ ಎಂದು ತಹಶೀಲ್ದಾರ್ ನಾಗರಾಜ ಕೆ. ಅವರು ಪ್ರಶ್ನಿಸಿದಕ್ಕೆ ಸಮರ್ಪಕವಾಗಿ ಉತ್ತರಿಸಲಾಗದೆ, ಏಜೆನ್ಸಿಗಳ ಪ್ರತಿನಿಧಿಗಳು ಮೌನಕ್ಕೆ ಶರಣಾದರು.

ನಂತರ ಮಾತನಾಡಿದ ಶಾಸಕ ಜಿ.ಎಸ್. ಪಾಟೀಲ, ‘ರಾಜ್ಯ ಸರ್ಕಾರವು ₹1,049 ಕೋಟಿ ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಜಾರಿಗೆ ತಂದಿದೆ. ನೀರು ಪೂರೈಕೆ ವ್ಯವಸ್ಥೆಗಾಗಿ ಪ್ರತಿ ವರ್ಷ ಏಜೆನ್ಸಿಗಳಿಗೆ ₹8 ಕೋಟಿ ನೀಡುತ್ತಿದೆ. ಆದರೂ, ಮತಕ್ಷೇತ್ರದ ಹಲವು ಗ್ರಾಮಗಳಿಗೆ ಸಮರ್ಪಕವಾಗಿ ನೀರು ತಲುಪುತ್ತಿಲ್ಲ. ಯೋಜನೆಯ ಪ್ರಕಾರ ಪ್ರತಿ ವ್ಯಕ್ತಿಗೆ ಪ್ರತಿ ದಿನ 75 ಲೀಟರ್ ನೀರು ಪೂರೈಕೆ ಆಗಬೇಕಿದೆ. ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಯನ್ನು ಸರ್ಕಾರ ಮಾಡಿಕೊಟ್ಟರೂ ನಿರ್ವಹಣಾ ಏಜೆನ್ಸಿಗಳು ಏನು ಮಾಡುತ್ತಿವೆ’ ಎಂದು ಖಾರವಾಗಿ ಪ್ರಶ್ನಿಸಿದರು.

‘ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ತಾಲ್ಲೂಕು ಮಟ್ಟದ ಅಧಿಕಾರಿಗಳು ಒಂದು ತಂಡವಾಗಿ ಕೆಲಸ ಮಾಡಬೇಕು. ಹೆಚ್ಚುವರಿ ನೀರು ಬಳಸುತ್ತಿರುವುದು ಕಂಡು ಬಂದರೆ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಶಾಂತಗೇರಿ, ಸರ್ಜಾಪುರ, ಮುಶಿಗೇರಿ ಭಾಗದಲ್ಲಿ ಕುಡಿಯುವ ನೀರಿನ ಗುಣಮಟ್ಟ ಕಳಪೆಯಾಗಿದ್ದು, ನೀರನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಬೇಕು’ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ರೋಣ, ಗಜೇಂದ್ರಗಡ, ಮುಂಡರಗಿ, ಗದಗ ತಾಲ್ಲೂಕುಗಳ ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ನೀರು ಸರಬರಾಜು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-23-2023765672

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.