ರೋಣ: ‘ಮಹಿಳೆಯರು ಕೇವಲ ಮನೆಯ ನಾಲ್ಕು ಗೋಡೆಗಳಿಗೆ ಸೀಮಿತವಾಗದೆ ಎಲ್ಲ ಕ್ಷೇತ್ರಗಳಲ್ಲಿಯೂ ಸ್ವಾವಲಂಬಿ ಜೀವನವನ್ನು ರೂಪಿಸಿಕೊಳ್ಳಬೇಕು. ಸಿಕ್ಕ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಸಾಧನೆಯತ್ತ ಮುಂದಾಗಬೇಕು’ ಎಂದು ಚಲನಚಿತ್ರ ನಟಿ ಕಾರುಣ್ಯ ರಾಮ್ ಹೇಳಿದರು.

ಪಟ್ಟಣದ ರಾಜೀವಗಾಂಧಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಶಾಸಕ ಜಿ.ಎಸ್.ಪಾಟೀಲ ಜನ್ಮದಿನದ ಅಂಗವಾಗಿ ಗುರುವಾರ ಆಯೋಜಿಸಿದ್ದ ಉದ್ಯೋಗ ಕ್ರಾಂತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಉತ್ತರ ಕರ್ನಾಟಕ ಭಾಗದ ಮಹಿಳೆಯರಿಗೆ ಸ್ಥಳೀಯವಾಗಿ ಹಾಗೂ ವಿವಿಧ ಮಲ್ಟಿ ನ್ಯಾಷನಲ್ ಕಂಪನಿಗಳಲ್ಲಿ ಉದ್ಯೋಗವನ್ನು ನೀಡುವ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸುತ್ತಿದ್ದಾರೆ’ ಎಂದರು.

ಶಿರಹಟ್ಟಿಯ ಫಕ್ಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿ, ‘ಮಹಿಳೆಯು ಅಬಲೆಯಲ್ಲ, ಸಬಲೆಯಾಗಿದ್ದು ಇಂದು ಎಲ್ಲ ಕ್ಷೇತ್ರದಲ್ಲಿಯೂ ಸಾಧನೆ ಮಾಡುತ್ತ ಬಂದಿದ್ದಾಳೆ’ ಎಂದರು.

ಶಾಸಕ ಜಿ.ಎಸ್.ಪಾಟೀಲ ಮಾತನಾಡಿ, ‘ಉತ್ತರ ಕರ್ನಾಟಕ ಭಾಗದಲ್ಲಿ ನಮ್ಮ ಕ್ಷೇತ್ರ ಹಿಂದುಳಿದ ಕ್ಷೇತ್ರವಾಗಿದ್ದು, ಕೃಷಿ ಇಲ್ಲಿ ಮೂಲ ಕಸಬು ಆಗಿದೆ. ಯುವಕ, ಯುವತಿಯರು, ಮಹಿಳೆಯರು ಉದ್ಯೋಗಕ್ಕಾಗಿ ಅಲೆದಾಡಬಾರದು ಎಂಬ ಉದ್ದೇಶದಿಂದ ಎಸ್.ಆರ್.ಪಾಟೀಲ ಪ್ರತಿಷ್ಠಾನದ ವತಿಯಿಂದ ನನ್ನ ಜನ್ಮದಿನದ ನಿಮಿತ್ಯ ಉದ್ಯೋಗ ಕ್ರಾಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸ್ವ ಉದ್ಯೋಗ ಸೇರಿದಂತೆ ನೂರಕ್ಕೂ ಹೆಚ್ಚು ಕಂಪನಿಗಳಲ್ಲಿ ಸಾವಿರಾರು ಜನರಿಗೆ ಸ್ಥಳೀಯವಾಗಿ ನೇಮಕಾತಿ ಮಾಡಿಕೊಂಡು ಉದ್ಯೋಗ ನೀಡಲಾಗುವುದು’ ಎಂದರು.

ಗುಲಗಂಜಿ ಮಠದ ಗುರುಪಾದ ಸ್ವಾಮೀಜಿ, ಕೆ.ಸಿ.ಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಐ.ಎಸ್.ಪಾಟೀಲ, ಅನ್ನಪೂರ್ಣಾ ಪಾಟೀಲ, ವೀರಣ್ಣ ಶೆಟ್ಟರ, ಮಿಥುನ್ ಪಾಟೀಲ, ಅಕ್ಷಯ ಪಾಟೀಲ, ಶಶಿಕಲಾ ಪಾಟೀಲ, ಸಿದ್ದಣ್ಣ ಬಂಡಿ, ಯಚ್ಚರಗೌಡ ಗೋವಿಂದಗೌಡ್ರ, ಮಂಜುಳಾ ಹುಲ್ಲಣ್ಣವರ, ರೂಪಾ ಅಂಗಡಿ, ಮಂಗಳಾ ಪಾಟೀಲ, ಸಾವಿತ್ರ ಗುಂಜಾಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-23-426936535

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.