ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐತಿಹಾಸಿಕ ರೊಟ್ಟಿ ಜಾತ್ರೆ ರದ್ದು

Last Updated 19 ಜನವರಿ 2021, 1:17 IST
ಅಕ್ಷರ ಗಾತ್ರ

ಡಂಬಳ (ಗದಗ): ಕೊರೊನಾ ಎರಡನೇ ಅಲೆಯ ಆತಂಕದ ಹಿನ್ನೆಲೆಯಲ್ಲಿ ಫೆಬ್ರುವರಿ 26,27ರಂದು ನಡೆಯಬೇಕಿದ್ದ ಐತಿಹಾಸಿಕ ‘ರೊಟ್ಟಿ ಜಾತ್ರೆ’ ರದ್ದುಪಡಿಸಲಾಗಿದೆ ಎಂದು ತೊಂಟದಾರ್ಯ ಮಠದ ಡಾ.ಸಿದ್ದರಾಮ ಸ್ವಾಮೀಜಿ ಹೇಳಿದರು.

ತೋಂಟದಾರ್ಯ ಕಲಾಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಠದ ರೊಟ್ಟಿ ಜಾತ್ರೆಯ ಪೂರ್ವಭಾವಿ ಸಭೆಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ‘ಜನರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಜಾತ್ರೆ ರದ್ದು ಮಾಡಲಾಗಿದೆ. ಆದರೆ, ಸಂಪ್ರದಾಯದಂತೆ ಧಾರ್ಮಿಕ ವಿಧಿ ವಿಧಾನಗಳನ್ನು ಸಾಂಕೇತಿಕವಾಗಿ ನೆರವೇರಿಸುತ್ತೇವೆ. ಧರ್ಮಸಭೆ, ಸಾಂಸ್ಕೃತಿಕ ಕಾರ್ಯಕ್ರಮ ಇರುವುದಿಲ್ಲ’ ಎಂದರು.

‘ಐದು ದಿನ ರುದ್ರಾಭಿಷೇಕ, ಫೆ.26ರಂದು ಮಹಾರಥೋತ್ಸವ, 27ರಂದು ಲಘುರಥೋತ್ಸವವನ್ನು ಸರಳವಾಗಿ ನೆರವೇರಿಸಲಾಗುವುದು’ ಎಂದುಮಠದ ಆಡಳಿತಾಧಿಕಾರಿ ಎಸ್.ಎಸ್ ಪಟ್ಟಣಶೆಟ್ಟರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT