ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲಕ್ಷ್ಮೇಶ್ವರ | ಶಾಲೆಗೆ ಸಂಕನೂರ, ಲಮಾಣಿ ಭೇಟಿ

Published 18 ಜೂನ್ 2024, 14:25 IST
Last Updated 18 ಜೂನ್ 2024, 14:25 IST
ಅಕ್ಷರ ಗಾತ್ರ

ಲಕ್ಷ್ಮೇಶ್ವರ: ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಮಂಗಳವಾರ ವಿಧಾನಪರಿಷತ್ ಸದಸ್ಯ ಪ್ರೊ.ಎಸ್.ವಿ. ಸಂಕನೂರ, ಶಾಸಕ ಡಾ.ಚಂದ್ರು ಲಮಾಣಿ ಭೇಟಿ ನೀಡಿದ್ದರು. ಶಿಥಿಲಗೊಂಡಿದ್ದ ಎರಡು ಕೊಠಡಿಗಳನ್ನು ನಿರ್ಮಾಣ ಮಾಡಿದ್ದನ್ನು ಶಾಸಕರು ಪರಿಶೀಲನೆ ನಡೆಸಿ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ತಿಳಿಸಿದರು.

ಮುಖ್ಯ ಶಿಕ್ಷಕ ಬಿ.ಎಂ. ಕುಂಬಾರ ಮಾತನಾಡಿ, ‘ಶಾಲೆಯ ಹಿಂದಿನ ಎರಡು ಕೊಠಡಿಗಳು ಶಿಥಿಲಗೊಂಡಿದ್ದು ಅವುಗಳನ್ನು ದುರಸ್ತಿ ಮಾಡಿಸಬೇಕು. ಮತ್ತು ಶಾಲೆ ಹಿಂಭಾಗದಲ್ಲಿ ಕಂಪೌಂಡ್ ನಿರ್ಮಿಸಬೇಕು’ ಎಂದು ಮನವಿ ಮಾಡಿದರು.

ಬಿಇಒ ಎಚ್.ಎನ್. ನಾಯಕ, ಇಸಿಒ ಉಮೇಶ ಹುಚ್ಚಯ್ಯನಮಠ, ಸಿಆರ್‌ಸಿ ಉಮೇಶ ನೇಕಾರ ಮತ್ತು ಶಿಕ್ಷಕ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT