ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಮೂಢನಂಬಿಕೆ ತೊಡೆದು ಹಾಕಲು ಶ್ರಮಿಸಿದ ಸಂತ’

Published 15 ಫೆಬ್ರುವರಿ 2024, 15:57 IST
Last Updated 15 ಫೆಬ್ರುವರಿ 2024, 15:57 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ಗದಗ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಗುರುವಾರ ಸಂತ ಸೇವಾಲಾಲ್ ಮಹಾರಾಜರ ಜಯಂತಿ ಆಚರಿಸಲಾಯಿತು.

ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ಪಿ.ವೈ.ನಾಯಕ ಮಾತನಾಡಿ, ‘ಸಂತ ಸೇವಾಲಾಲ್ ಮಹಾರಾಜರು ಬಂಜಾರ ಸಮುದಾಯದ ಆರಾಧ್ಯ ದೈವವಾಗಿದ್ದು, ಸಮುದಾಯದಲ್ಲಿನ ಮೂಢನಂಬಿಕೆಗಳನ್ನು ತೊಡೆದು ಹಾಕಲು ಶ್ರಮಿಸಿದರು. ಅವರ ಜೀವನ ಸಂದೇಶಗಳನ್ನು ಇಂದಿನ ಯುವಜನರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಕಚೇರಿಯ ಇಲಾಖಾ ಮುಖ್ಯಸ್ಥ ರಾಜೇಶ ಹುದ್ದಾರ, ಗದಗ ಜಿಲ್ಲಾ ಮುಖ್ಯ ಸಂಚಾರ ವ್ಯವಸ್ಥಾಪಕ ವಿವೇಕಾನಂದ ವಿಶ್ವಜ್ಞ, ಮುಖ್ಯ ಸಿಬ್ಬಂದಿ ವ್ಯವಸ್ಥಾಪಕಿ ವಿಜಯಶ್ರೀ ನರಗುಂದ, ಮುಖ್ಯ ಎಂಜಿನಿಯರ್‌ ದಿವಾಕರ ಯರಗೊಪ್ಪ, ಮುಖ್ಯ ಲೆಕ್ಕಾಧಿಕಾರಿ ಹಾಗೂ ಆರ್ಥಿಕ ಸಲಹೆಗಾರರು ಜಗದಂಬಾ, ಉಪಮುಖ್ಯ ಭದ್ರತಾ ಹಾಗೂ ಜಾಗೃತಾಧಿಕಾರಿ ದಶರಥ ಕೆಳಗೇರಿ,  ಕೇಂದ್ರ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

ವಿರೂಪಾಕ್ಷ ಕಟ್ಟಿಮನಿರವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮವನ್ನು ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT