ಗುರುವಾರ , ಅಕ್ಟೋಬರ್ 22, 2020
22 °C
ಕರ್ನಾಟಕ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ- –2020

ವೇಳಾಪಟ್ಟಿ,ಮಾರ್ಗಸೂಚಿ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ‘ಪಶ್ಚಿಮ ಪದವೀಧರ ಕ್ಷೇತ್ರ ದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸುವ ಕುರಿತು ಚುನಾ ವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದೆ’ ಎಂದು ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾ ವಣಾಧಿಕಾರಿ ಹಾಗೂ ಬೆಳಗಾವಿ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ತಿಳಿಸಿದ್ದಾರೆ.

‘ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಅ.8 ಕೊನೆಯ ದಿನವಾಗಿದ್ದು, ಅ.9ರಂದು ನಾಮಪತ್ರ ಪರಿಶೀಲನೆ ನಡೆಯುವುದು. ನಾಮಪತ್ರ ಹಿಂಪಡೆ ಯಲು ಅ.12 ಕೊನೆಯ ದಿನವಾಗಿದೆ. ಅ.28ರಂದು ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ನ.2ರಂದು ಮತಎಣಿಕೆ ನಡೆಯಲಿದೆ. ನ.5ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಪಶ್ಚಿಮ ಪದವೀಧ ರರ ಕ್ಷೇತ್ರ ವ್ಯಾಪ್ತಿಯ ಧಾರವಾಡ, ಗದಗ, ಹಾವೇರಿ ಹಾಗೂ ಉತ್ತರಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿ ಆಗಿರುತ್ತಾರೆ’ ಎಂದು ಅವರು ತಿಳಿಸಿದ್ದಾರೆ. 

ಚುನಾವಣೆಗೆ ಸ್ಪರ್ಧಿಸುವವರು ಚುನಾವಣಾಧಿಕಾರಿ, ಸಹಾಯಕ ಚುನಾವಣಾಧಿಕಾರಿ ಧಾರವಾಡ ಕಚೇರಿಯಲ್ಲಿ ನಾಮಪತ್ರ ನಮೂನೆ 2ಎ, ಪರಿಷ್ಕೃತ ಪ್ರಮಾಣ ಪತ್ರ ನಮೂನೆ-26 ಹಾಗೂ ಇತರೆ ನಮೂನೆಗಳನ್ನು ಅಕ್ಟೋಬರ್ 1ರಿಂದ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ನಮೂನೆಗಳನ್ನು ಅ.1ರಿಂದ ಅ.8ರವರೆಗೆ ಸಾರ್ವತ್ರಿಕ ರಜಾ ದಿನ ಹೊರತುಪಡಿಸಿ ಬೆಳಿಗ್ಗೆ 11ರಿಂದ ಮಧ್ಯಾಹ್ನ 3ರವರಗೆ ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಸಲ್ಲಿಸಬೇಕು. ಪ್ರಮಾಣಪತ್ರ ಮತ್ತು ನಮೂನೆ ಎಎ ಮತ್ತು ನಮೂನೆ ಬಿಬಿಗಳನ್ನು ನಾಮಪತ್ರದೊಂದಿಗೆ ಸಲ್ಲಿಸದಿದ್ದಲ್ಲಿ ನಾಮಪತ್ರ ಸಲ್ಲಿಸುವ ಕೊನೆ ದಿನವಾದ ಅ. 8ರಂದು ಮಧ್ಯಾಹ್ನ 3 ಗಂಟೆಯೊಳಗೆ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.

ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಯ ವೇಳೆ ಪ್ರಜಾ ಪ್ರತಿನಿಧಿ ಕಾಯ್ದೆ-1951ರ ಕಲಂ 34ರ ಮೇರೆಗೆ ಸಾಮಾನ್ಯ ವರ್ಗದವರು ₹10 ಸಾವಿರ ಹಾಗೂ ಪರಿಶಿಷ್ಟ ಜಾತಿ, ಪಂಗಡದವರು ₹5 ಸಾವಿರ ಠೇವಣಿ ಇಡಬೇಕು.

ಸುಪ್ರೀಂ ಕೋರ್ಟ್‌ನ 2013 ಸೆಪ್ಟಂಬರ್ 13ರ ಆದೇಶದಂತೆ ಅಭ್ಯರ್ಥಿಗಳು ನಾಮಪತ್ರದೊಂದಿಗೆ ಸಲ್ಲಿಸುವ ಪ್ರಮಾಣಪತ್ರದಲ್ಲಿನ ಎಲ್ಲ ಅಂಕಣಗಳನ್ನು ಸೂಕ್ತ ಮಾಹಿತಿಯೊಂದಿಗೆ ಭರ್ತಿ ಮಾಡಬೇಕು ಎಂದು ಸೂಚಿಸಲಾಗಿದೆ.

ಅಭ್ಯರ್ಥಿಗಳು, ರಾಜಕೀಯ ಪಕ್ಷದವರು ಚುನಾವಣೆ ಸಂದರ್ಭದಲ್ಲಿ ಪ್ರಚಾರ ಹಾಗೂ ಇನ್ನಿತರೆ ಕಾರ್ಯಗಳಲ್ಲಿ ಚುನಾವಣಾ ಆಯೋಗವು ಹೊರಡಿಸಿರುವ ಕೋವಿಡ್-19ರ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು