ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಿರಿಯ ನಾಗರಿಕರಿಗೆ ಸಾಧನಗಳ ವಿತರಣೆ

Published 15 ಫೆಬ್ರುವರಿ 2024, 15:58 IST
Last Updated 15 ಫೆಬ್ರುವರಿ 2024, 15:58 IST
ಅಕ್ಷರ ಗಾತ್ರ

ಗದಗ: ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಗುರುವಾರ ಭಾರತೀಯ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಭಾರತೀಯ ಕೃತಕ ಅಂಗಗಳ ಉತ್ಪಾದನಾ ನಿಗಮದ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ವಯೋಶ್ರೀ ಯೋಜನೆ ಅಡಿಯಲ್ಲಿ ಹಿರಿಯ ನಾಗರಿಕರ ದೈನಂದಿನ ಜೀವನಕ್ಕೆ ನೆರವಾಗುವ ಸಹಾಯ ಸಾಧನಗಳನ್ನು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ವಿತರಿಸಿದರು.

ಕಾರ್ಯಕ್ರಮದಲ್ಲಿ ಶ್ರವಣ ಯಂತ್ರ, ಊರುಗೋಲು, ಚಕ್ರ ಕುರ್ಚಿ ಸೇರಿದಂತೆ ವಿವಿಧ ಸಹಾಯ ಸಾಧನಗಳನ್ನು ವಿವಿಧ ತಾಲ್ಲೂಕುಗಳಿಂದ ಬಂದಿದ್ದ ಫಲಾನುಭವಿಗಳಿಗೆ ವಿತರಿಸಲಾಯಿತು.

ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಮಹಾಂತೇಶ ಕೆ., ಮಾದಕ ದ್ರವ್ಯ ತಡೆ ವಿಭಾಗದ ಸಹಾಯಕ ವಿಭಾಗಾಧಿಕಾರಿ ಪ್ರತೀಕ್‌ ಯಾದವ್‌, ಭಾರತೀಯ ಕೃತಕ ಅಂಗಗಳ ಉತ್ಪಾದನಾ ನಿಗಮದ ಆದರ್ಶ ಸಿಂಗ್ ಇದ್ದರು.

ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಪ್ರಕಾಶ ಗಾಣಿಗೇರಿ ಕಾರ್ಯಕ್ರಮ ನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT