ಮುಂಡರಗಿ: ಗ್ರಾಮದ ದಲಿತ ಕುಟುಂಬಗಳಿಗೆ ಪ್ರತ್ಯೇಕ ನ್ಯಾಯಬೆಲೆ ಅಂಗಡಿ ತೆರೆಯುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ತಾಲ್ಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದ ದಲಿತ ಕುಟುಂಬಗಳ ಸದಸ್ಯರು ಡಿ.ಎಸ್.ಎಸ್ ನೇತೃತ್ವದಲ್ಲಿ ಗುರುವಾರ ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.

ಚಿಕ್ಕವಡ್ಡಟ್ಟಿ ಗ್ರಾಮದ ಅಂಬೇಡ್ಕರ್ ಕಾಲೊನಿಯಲ್ಲಿ 150 ದಲಿತ ದಲಿತ ಕುಟುಂಬಗಳು ವಾಸಿಸುತ್ತಿವೆ. ಗ್ರಾಮದಲ್ಲಿ ಈಚೆಗೆ ಸವರ್ಣಿಯರು ಹಾಗೂ ದಲಿತ ಕುಟುಂಬಗಳ ಮಧ್ಯದಲ್ಲಿ ಗಲಾಟೆ ನಡೆದಿದ್ದು, ದಲಿತ ಕುಟುಂಬದವರು ಪಡಿತರ ತರಲು ಗ್ರಾಮದೊಳಗೆ ಹೋಗಲು ಹಿಂಜರಿಯುತ್ತಿದ್ದಾರೆ. ಆದ್ದರಿಂದ ಗ್ರಾಮದ ಅಂಬೇಡ್ಕರ್ ನಗರದಲ್ಲಿ ಪ್ರತ್ಯೇಕ ನ್ಯಾಯಬೆಲೆ ಅಂಗಡಿ ತೆರೆಯಬೇಕು ಎಂದು ಒತ್ತಾಯಿಸಿದರು.

‘ಸವರ್ಣಿಯರು ಹಾಗೂ ದಲಿತರ ನಡುವೆ ನಡೆದ ಗಲಾಟೆಯ ಕಾರಣದಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣವಿದ್ದು, ದಲಿತ ಸಮುದಾಯದ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಸಮುದಾಯ ಶೌಚಾಲಯ ನಿರ್ಮಿಸಿಕೊಡಬೇಕು’ ಎಂದು ಆಗ್ರಹಿಸಿದರು.

‘ಚಿಕ್ಕವಡ್ಡಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನರೇಗಾ ಯೋಜನೆಯಡಿ ದಲಿತ ಸಮುದಾಯದವರಿಗೆ ನಿರಂತರ ಕೆಲಸ ನೀಡಬೇಕು’ ಎಂದು ಒತ್ತಾಯಿಸಿದರು.

ಗಲಾಟೆಯಲ್ಲಿ ಹಲವು ದಲಿತರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡಿರುವ ದಲಿತ ಕುಟುಂಬಗಳ ಸದಸ್ಯರಿಗೆ ಸರ್ಕಾರ ಸೂಕ್ತ ಪರಿಹಾರ ವಿತರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ತಕ್ಷಣ ಚಿಕ್ಕವಡ್ಡಟ್ಟಿ ಗ್ರಾಮದ ಅಂಬೇಡ್ಕರ್ ಕಾಲೊನಿಯ ಸಮಸ್ಯೆಗಳನ್ನು ಈಡೇರಿಸಬೇಕು. ಇಲ್ಲದಿದ್ದಲ್ಲಿ ಹೋರಾಟ ಕೈಗೊಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ತಹಶೀಲ್ದಾರ್ ಎರ್ರಿಸ್ವಾಮಿ.ಪಿ.ಎಸ್ ಮನವಿ ಸ್ವೀಕರಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ದುರಗಪ್ಪ ಹರಿಜನ, ತಾಲ್ಲೂಕು ಸಂಚಾಲಕ ಸೋಮಣ್ಣ ಹೈತಾಪುರ, ಶಿವಾನಂದ ದೊಡ್ಡಮನಿ, ಕಟ್ಟೆಪ್ಪ ಚಿಗರಮ್ಮನವರು, ಶಿಪುತ್ರಪ್ಪ ಗುಂಡಪ್ಪನವರು, ಪಕ್ಕೀರಪ್ಪ ಸೊಮ್ಮನವರ, ರಣದಪ್ಪ ಮೈಲೆಮ್ಮನವರ, ಬಸವರಾಜ ತಿಮ್ಮಣ್ಣವರ, ಮಜ್ಜೂರಪ್ಪ ಉಡಚಮ್ಮನವರ, ಹನುಮಂತ ದೊಡ್ಡಮನಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-23-406022237

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.