ಶಿರಹಟ್ಟಿ: ಕಡಕೋಳ ಹಾಗೂ ಛಬ್ಬಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿನ ಪ್ರಗತಿಯಲ್ಲಿರುವ ಸಮುದಾಯ ಕಾಮಗಾರಿಗಳನ್ನು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ ಬುಧವಾರ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಕಾಮಗಾರಿ ಸ್ಥಳದಲ್ಲಿ ಹಾಜರಿದ್ದ ಕೂಲಿಕಾರ್ಮಿಕರ ಜೊತೆಯಲ್ಲಿ ಮಾತನಾಡಿದ ಅವರು, ಪ್ರತಿ ಕೂಲಿ ಕಾರ್ಮಿಕರಿಗೆ ಆಳತೆಯ ಪ್ರಕಾರ ಕೆಲಸ ಮಾಡಿದರೆ ₹ 370 ದೊರೆಯುತ್ತದೆ. ಹಿರಿಯ ನಾಗರಿಕರಿಗೆ, ಗರ್ಭಿಣಿಯರಿಗೆ, ಅಂಗವಿಕಲರಿಗೆ ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ಇರುತ್ತದೆ. ಎಲ್ಲ ಕೂಲಿ ಕಾರ್ಮಿಕರು ಅಳತೆಗೆ ತಕ್ಕ ಕೆಲಸವನ್ನು ಮಾಡಿ ಎರಡು ಬಾರಿ ಹಾಜರಾತಿ ಹಾಕಬೇಕು ಎಂದರು.

ದಿನಕ್ಕೆ ಎರಡು ಬಾರಿ ಹಾಜರಾತಿ ಹಾಕದ ಕಾರ್ಮಿಕರಿಗೆ ಕೂಲಿ ಹಣ ಪಾವತಿ ಆಗುವುದಿಲ್ಲ. ಕೂಲಿಕಾರರು ಆರೋಗ್ಯವನ್ನು ಸರಿಯಾಗಿ ಇಟ್ಟುಕೊಳ್ಳಬೇಕಿದ್ದು, ಬೆಳಿಗ್ಗೆ ಬೇಗ ಬಂದು ಅಳತೆಗೆ ತಕ್ಕ ಕೆಲಸ ನೀಡಿ ಬೇಗ ಮುಗಿಸಿಕೊಂಡು ಹಾಜರಾತಿ ನೀಡಿ ಮನೆಗೆ ಹೋಗಬೇಕು. ಎರಡು ಬಾರಿ ಹಾಜರಾತಿ ನೀಡಿದವರಿಗೆ ₹ 370 ಕೂಲಿ ಜಮೆ ಆಗಲಿದ್ದು, ಕೆಲಸದಿಂದ ಬಂದ ಕೂಲಿ ಹಣವನ್ನು ಕೃಷಿ ಚಟುವಟಿಕೆಗಳಿಗೆ, ಮಕ್ಕಳ ಶಿಕ್ಷಣದ ಅಗತ್ಯತೆಗಳಿಗೆ, ಕುಟುಂಬದ ನಿರ್ವಹಣೆಗೆ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಕಡಕೋಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಾನಂದ ಮಾಳವಾಡ, ಛಬ್ಬಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಜಾತಾ ಕಪ್ಪಲಿ, ಡಿಟಿಒ ಫಕ್ಕಿರೇಶ ಕಲ್ಮನಿ, ಟಿಐಇಸಿ ವಿರೇಶ್ ಪಟ್ಟಣಶೆಟ್ಟಿ, ತಾಂತ್ರಿಕ ಸಹಾಯಕ ಆಂಜನೇಯ, ಲಿಂಗರಾಜ, ಬಿಎಫ್ಟಿ, ಡಿಇಒ, ಕಾಯಕ ಬಂಧುಗಳು, ನರೇಗಾ ಕೂಲಿ ಕಾರ್ಮಿಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-23-1756226277

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.