ಶಿರಹಟ್ಟಿ: ‘ಹಿಂದೂ ಸಮುದಾಯಗಳು ಒಗ್ಗಟ್ಟಾಗಿ ‘ನಾವೆಲ್ಲರು ಹಿಂದೂ, ನಾವೆಲ್ಲರು ಒಂದು’ ಎಂಬ ಘೋಷಣೆಯೊಂದಿಗೆ ಹಿಂದೂ ವಿರೋಧಿಗಳಿಗೆ ತಕ್ಕ ಪಾಠ ಕಲಿಸಬೇಕು’ ಎಂದು ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿದರು.

ಸ್ಥಳೀಯ ಎಫ್.ಎಂ. ಡಬಾಲಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವಿವಿಧ ಹಿಂದೂ ಸಂಘಟನೆ ವತಿಯಿಂದ ಕನಕದಾಸರು ಹಾಗೂ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಅಂಗವಾಗಿ ಶನಿವಾರ ನಡೆದ ಹಿಂದೂ ಸಮಾವೇಶದಲ್ಲಿ ಮಾತನಾಡಿದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಳೆದ ನೂರು ವರ್ಷಗಳಿಂದ ಹಿಂದೂಗಳಲ್ಲಿ ಜಾಗ್ರತೆ ಮೂಡಿಸುತ್ತಿದೆ. ಅಮಾಯಕ ಹಿಂದೂಗಳ ಮೇಲೆ ಭಯೋತ್ಪಾದಕರು ದೌರ್ಜನ್ಯ, ದಬ್ಬಾಳಿಕೆ ನಡೆಸುತ್ತಿದ್ದು, ತಡೆಗಟ್ಟಲು ಹಿಂದೂಗಳು ಪಣ ತೊಡುವ ಅವಶ್ಯವಿದೆ’ ಎಂದರು.

ಪಟ್ಟಣದಿಂದ ಮೂರು ಜಿಲ್ಲೆಗಳಿಗೆ ಗೋಮಾಂಸ ಸರಬರಾಜು ಆಗುತ್ತಿರುವ ವಿಷಯ ತಿಳಿಯುತ್ತಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಇದು ಹೇಗೆ ಸಾಧ್ಯ? ಆರೋಪಿಗಳ ವಿರುದ್ಧ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ‘ರಾಜ್ಯದ ಜನತೆ ಉತ್ತರ ಪ್ರದೇಶದ ಮಾದರಿಯಲ್ಲಿ ಆಡಳಿತ ಬರಬೇಕೆಂಬ ನಿರೀಕ್ಷೆಯಲ್ಲಿದ್ದಾರೆ. ಪೊಲೀಸರ ನೈತಿಕ ಬಲ ಕುಸಿದಿದ್ದರಿಂದ ದೇಶದ ಅನೇಕ ಸ್ಥಳಗಳಲ್ಲಿ ಹಿಂದೂಗಳ ಮೇಲೆ ಹಲ್ಲೆ ನಡೆಯುತ್ತಿವೆ. 2028ಕ್ಕೆ ನಮ್ಮ ಸರ್ಕಾರ ಬಂದರೆ ಪೊಲೀಸ್ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡುತ್ತೇನೆ’ ಎಂದು ಹೇಳಿದರು.

ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಹುಲ್ಲೂರಿನ ಅಮೋಘ ಸಿದ್ದೇಶ್ವರ ಸ್ವಾಮೀಜಿ, ಶ್ರೀರಾಮ ಸೇನೆಯ ರಾಜ್ಯ ಸಂಚಾಲಕ ರಾಜು ಖಾನಪ್ಪನವರ, ಸಂತೋಷ ಕುರಿ, ನಾಗರಾಜ ಲಕ್ಕುಂಡಿ, ಬಸವರಾಜ ಪಲ್ಲೇದ, ರಾಮಣ್ಣ ಕಂಬಳಿ, ಶಂಕರ ಮರಾಠೆ, ಪ್ರವೀಣಗೌಡ ಪಾಟೀಲ, ಶಂಕರ ಭಾವಿ, ಜಾನು ಲಮಾಣಿ, ಆನಂದ ಸ್ವಾಮಿ, ಬಸವರಾಜ ಕಲ್ಯಾಣಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.