ಶಿರಹಟ್ಟಿ: ಸ್ಥಳೀಯ ಪಿ.ಎಂ ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯಲ್ಲಿ 2025-26ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂ ನೀಡಿ, ಪುಷ್ಪ ವೃಷ್ಟಿ ಮಾಡಿ ಸ್ವಾಗತಿಸಲಾಯಿತು.

ಪ.ಪಂ ಮುಖ್ಯಾಧಿಕಾರಿ ಸವಿತಾ ತಾಂಬ್ರೆ ಮಾತನಾಡಿ, ‘ಉಜ್ವಲ ಭವಿಷ್ಯ ಕಟ್ಟಿಕೊಳ್ಳಲು ಮತ್ತು ದೇಶದ ಅಭಿವೃದ್ಧಿಗೆ ಗುಣಮಟ್ಟದ ಶಿಕ್ಷಣ ಅತ್ಯಗತ್ಯ. ಸರ್ಕಾರಿ ಶಾಲೆ ಎಂದರೆ ಮೂಗು ಮುರಿಯುವ ಕಾಲ ಈಗ ದೂರವಾಗಿದೆ. ಅತ್ಯಾಧುನಿಕ ಸೌಲಭ್ಯಗಳ ಮೂಲಕ ಸರ್ಕಾರಿ ಶಾಲೆಗಳು ಇಂದು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿವೆ. ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನ ಲಭ್ಯವಾಗುತ್ತಿದೆ. ಕಾರ್ಯಕ್ರಮಕ್ಕೆ ಶಿಕ್ಷಕರು ಬಹಳ ಉತ್ಸಾಹದಿಂದ ಮತ್ತು ವರ್ಣರಂಜಿತವಾಗಿ ಆಗಮಿಸಿದ್ದಾರೆ, ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಶ್ರಮ ಅನನ್ಯ’ ಎಂದರು.

ಶಿರಹಟ್ಟಿ ಕ್ಲಸ್ಟರ್ ಸಿಆರ್ಪಿ, ಎನ್.ಎನ್ ಸಾವಿರಕುರಿ ಮಾತನಾಡಿದರು. ಪ್ರಸಕ್ತ ಸಾಲಿನ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಲಾಯಿತು.

ಮುಖ್ಯಶಿಕ್ಷಕಿ ಆರ್.ಬಿ ಪಲೇದ, ಉರ್ದು ಕ್ಲಸ್ಟರ್ ಸಿಆರ್ಪಿ ಜಾಫರ್ ಬದಾಮಿ, ನೌಕರ ಸಂಘದ ನಿರ್ದೇಶಕ ಕಾಶಪ್ಪ ಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕಿ ಯಾಸ್ಮಿನ ಶಿರಹಟ್ಟಿ ಸೇರಿದಂತೆ ಶಾಲಾ ಶಿಕ್ಷಕರು, ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು ಹಾಗೂ ವಿದ್ಯಾರ್ಥಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-23-1852040314

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.