ಶಿರಹಟ್ಟಿ: ಮೇ 1 ಮತ್ತು 2ರಂದು ನಡೆಯುವ ಫಕ್ಕೀರೇಶ್ವರ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಹಾಗೂ ಮಠದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ತಹಶೀಲ್ದಾರ್ ಕೆ.ರಾಘವೇಂದ್ರ ರಾವ್ ಹೇಳಿದರು.

ಸ್ಥಳೀಯ ಫಕ್ಕಿರೇಶ್ವರ ಮಠದ ಸಭಾ ಭವನದಲ್ಲಿ ಬುಧವಾರ ಕರೆಯಲಾಗಿದ್ದ ಫಕ್ಕೀರೇಶ್ವರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಪಟ್ಟಣ ಪಂಚಾಯಿತಿ ಹಾಗೂ ಇತರೆ ಇಲಾಖೆಗಳ ಸಹಯೋಗದೊಂದಿಗೆ ಜಾತ್ರಾ ಮಹೋತ್ಸವವು ಯಶಸ್ವಿಯಾಗಿ ನೇರವೇರುವಂತೆ ಕ್ರಮ ಕೈಗೊಳ್ಳಲಾಗುವುದು. ಅದಕ್ಕಾಗಿ ಮಠದ ಟ್ರಸ್ಟ್ ಕಮೀಟಿ ಹಾಗೂ ಸಾರ್ವಜನಿಕರಿಂದ ಸಹಕಾರ ಅಗತ್ಯವಾಗಿರುತ್ತದೆ. ಜಾತ್ರೆಯಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಹಾಕಿ ಕೊಳ್ಳುವವರಿಗೆ ಶ್ರೀಮಠದಿಂದ ಪರವಾನಿಗೆ ನೀಡುವಾಗ ಸ್ವಚ್ಚತೆಯನ್ನು ಕಾಪಾಡುವಂತೆ, ವಿದ್ಯುತ್ ಇಲಾಖೆಯ ಪರವಾನಿಗೆ ಪಡೆದು ಅಧಿಕೃತ ಸಂಪರ್ಕ ಪಡೆಯುವಂತೆ ಮತ್ತು ಜಾತ್ರೆಗೆ ಬರುವ ಜನರಿಗೆ ತೊಂದರೆಯಾಗದಂತೆ ನಿಗದಿ ಪಡೆಸಿದ ಸ್ಥಳಗಳಲ್ಲಿಯೇ ಅಂಗಡಿ ಮುಗ್ಗಟ್ಟುಗಳನ್ನು ತೆರೆಯುವಂತೆ ಸೂಚಿಸಬೇಕು.

ಆರೋಗ್ಯ ಇಲಾಖೆಯು 24/7 ಮಠದ ಆವರಣದಲ್ಲಿಯೇ ಒಂದು ಕ್ಯಾಂಪ್ ಹಾಕುವ ಮೂಲಕ ಜನರ ಸೇವೆಗೆ ಸಿದ್ದವಾಗಬೇಕು. ಮತ್ತು ತುರ್ತು ಸಮಯಕ್ಕೆ ಅನುಕೂಲಕವಾಗುವಂತೆ ಆ್ಯಂಬುಲನ್ಸ್ ವ್ಯವಸ್ಥೆಯನ್ನು ಕೂಡಾ ಮಾಡಿಕೊಂಡಿರಬೇಕು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೊಬಸ್ತ್ ಮಾಡಲಾಗಿದ್ದು, ಭಕ್ತರು ಸಹಕರಿಸಿ ಜಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ಹೇಳಿದರು.

ಡಿವೈಎಸ್ಪಿ (ಗದಗ ಉಪವಿಭಾಗ) ಮುರ್ತುಜಾ ಖಾದ್ರಿ ಮಾತನಾಡಿ, ಪ್ರತಿವರ್ಷದಂತೆ ಫಕ್ಕಿರೇಶ್ವರ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆಯಿದ್ದು, ಅದಕ್ಕಾಗಿ ಜಾತ್ರೆಗೆ ಹೋಗಿ ಬರುವ ಜನರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಜಾತ್ರಾ ಮಹೋತ್ಸವದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಫ್ರೀ ಟ್ರಾಫಿಕ್ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ಭಕ್ತಾದಿಗಳಿಗೆ ರಕ್ಷಣೆ, ಶ್ರೀ ಮಠದ ಧಾರ್ಮಿಕ ಕಾರ್ಯಕ್ರಮಗಳಿಗೆ ತೊಂದರೆ ಆಗದಂತೆ, ಶ್ರೀಗಳಗೆ ಸೂಕ್ತ ಬಂದೊಬಸ್ತ್ ನೀಡಲಾಗುವುದು. ಶ್ರೀ ಮಠದ ಆವರಣವು ಸೇರಿದಂತೆ ಅಗತ್ಯ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳ ಜೋಡಣೆ, ಡಿವೈಡರ್ ನಿರ್ಮಾಣಗಳಂತಹ ಹಲವು ವಿಷಯಗಳ ಬಗ್ಗೆ ಕಳೆದ ಮೂರನಾಲ್ಕು ದಿನಗಳಿಂದ ಚಿಂತಿಸಲಾಗುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು. ರಥೋತ್ಸವ ಹಾಗೂ ಕಡುಬಿನ ಕಾಳಗದಂದು ಡಿಎಆರ್, ಕೆಎಸ್ಆರ್ಪಿ ತುಕಡಿ ಸೇರಿದಂತೆ ಸ್ಥಳೀಯ ಪೊಲೀಸ್ ಸಿಬ್ಬಂದಿ ನೇಮಿಸಲಾಗುತ್ತಿದೆ. ಪೋಲಿಸ್ ಕರ್ತವ್ಯ ನಿರ್ವಹಣೆಗೆ ಸಾರ್ವಜನಿಕರ ಸಹಕಾರವು ಅಗತ್ಯವಾಗಿದ್ದು ಈ ದೆಸೆಯಲ್ಲಿ ಜನರು ಪೋಲಿಸರೊಂದಿಗೆ ಸಹಕರಿಸಲು ಕೊರಲಾಗುತ್ತದೆ ಎಂದರು.

ಸಿಪಿಐ ಬಿ.ವಿ.ನ್ಯಾಮಗೌಡ, ಪಿಎಸ್ಐ ಈರಪ್ಪ ರಿತ್ತಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸವಿತಾ ತಾಂಬ್ರೆ, ಡಾ.ಪವನ ಫಾಯದೆ, ಪ.ಪಂ. ಮಾಜಿ ಅಧ್ಯಕ್ಷ ಹುಮಾಯೂನ ಮಾಗಡಿ, ಚಂದ್ರಕಾಂತ ನೂರಶೆಟ್ಟರ, ಅಜ್ಜನಗೌಡ್ರ ಪಾಟೀಲ, ಸಂದೀಪ ಕಪ್ಪತ್ತನವರ, ಎಮ್.ಸಿ.ಹಿರೇಮಠ, ಬಿ.ಎಸ್.ಹಿರೇಮಠ, ಸಿ.ಕೆ.ಮುಳಗುಂದ ಸೇರಿದಂತೆ ಇಲಾಖೆಗಳ ಅಧಿಕಾರಿಗಳು ಮತ್ತು ಮುಖಂಡರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-23-1675692967

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.