ಶಿರಹಟ್ಟಿ: ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಗೆ 28 ಇಲಾಖೆಗಳ ಪೈಕಿ ಕೇವಲ 6 ಮಂದಿ ಅಧಿಕಾರಿಗಳು ಹಾಜರಾಗಿದ್ದರು. ಗೈರು ಹಾಜರಾದ ಅಧಿಕಾರಿಗಳ ವಿರುದ್ದ ಶಿಸ್ತುಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಸಿಇಒಗೆ ಶಿಫಾರಸು ಮಾಡಲಾಗುವುದು’ ಎಂದು ಶಿರಹಟ್ಟಿ ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಎ.ಎ. ಕಂಬಾಳಿಮಠ ಹೇಳಿದರು.

ತಾಲ್ಲೂಕು ಪಂಚಾಯಿತಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಮಾರ್ಚ್ ತಿಂಗಳು ಅಂತ್ಯಗೊಳ್ಳುತ್ತಿದ್ದು ಏಪ್ರಿಲ್ ಮೊದಲ ವಾರದಲ್ಲಿ ಇಲಾಖೆಯಿಂದ ಸಿದ್ದಪಡಿಸಿದ ಹೊಸ ಕ್ರಿಯಾಯೋಜನೆಗೆ (ಮುಂದಿನ ವರ್ಷದ) ಅನುಮತಿ ಪಡೆಯ ಬೇಕಾಗಿದ್ದರಿಂದ ಈ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿತ್ತು. ಆದರೆ 6-7 ಇಲಾಖೆ ಹೊರತು ಪಡಿಸಿ ಉಳಿದ ಅಧಿಕಾರಿಗಳು ವಿನಾಕಾರಣ ಗೈರಾಗಿರುವುದಕ್ಕೆ ಅವರಿಗೆ ಶಿಸ್ತಿನ ಪಾಠ ಕಲಿಸಬೇಕಾಗಿದೆ’ ಎಂದರು.

'ಅಧಿಕಾರಿಗಳು ತಮ್ಮ ಸ್ಥಾನದ ಜವಾಬ್ದಾರಿಯನ್ನರಿತು ಇಲಾಖೆಯಿಂದ ಕೈಗೊಳ್ಳುವ ಪ್ರಗತಿ ಕಾರ್ಯದ ಬಗ್ಗೆ ಪಿಆರ್ಇಡಿಯಿಂದ ಅಂದಾಜು ಪತ್ರಿಕೆ ಸಿದ್ದಪಡಿಸಿಕೊಳ್ಳಬೇಕು. ಅಗತ್ಯಾನುಸಾರ ಕೆಲಸಗಳಿಗೆ ಮಾತ್ರ ಅವಕಾಶ ನೀಡಿ ಕ್ರಿಯಾಯೋಜನೆ ಸಿದ್ದಪಡಿಸಿ ತಾಲ್ಲೂಕು ಪಂಚಾಯಿತಿ ಇಒ ಅವರ ಮೂಲಕ ಜಿಲ್ಲಾ ಪಂಚಾಯಿತಿಗೆ ಸಲ್ಲಿಸಿ ಅನುಮೋದನೆ ಪಡೆದಾಗ ಮಾತ್ರ ಹೊಸ ವರ್ಷಕ್ಕೆ ಮೀಸಲಿಟ್ಟ ಅನುದಾನ ಪಡೆಯಲು ಸಾಧ್ಯವಿದೆ. ವಿಶೇಷವಾಗಿ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಲಭ್ಯಗಳಿಗೆ ಮಾತ್ರ ಪ್ರಮುಖ ಆದ್ಯತೆ ನೀಡಬೇಕು’ ಎಂದು ಸೂಚನೆ ನೀಡಿದರು.

ತಾಲ್ಲೂಕಿನ ಶಾಲೆಗಳ ದುರಸ್ತಿ ಕಾರ್ಯಕ್ಕೆ ಮತ್ತು ಅಂಗನವಾಡಿ ಕಟ್ಟಡಗಳ ನಿರ್ಮಾಣ ಮತ್ತು ದುರಸ್ತಿ ಕಾರ್ಯಕ್ಕೆ ಜಿಲ್ಲಾ ಪಂಚಾಯಿತಿಯಿಂದ ಅನುದಾನ ಲಭ್ಯವಿದೆ. ಅಗತ್ಯಾನುಸಾರ ಪರಿಶೀಲನೆ ನಡೆಸಿ ಕ್ರಿಯಾಯೋಜನೆ ಸಿದ್ದಪಡಿಸಿ ಅನುದಾನ ಪಡೆಯಲು ಬಿಇಒ ಮತ್ತು ಸಿಡಿಪಿಒ ಅವರಿಗೆ ತಿಳಿಸಿದರು.

ತಾಲ್ಲೂಕು ಪಂಚಾಯಿತಿಯಿಂದ ತಾಲ್ಲೂಕಿನಲ್ಲಿ ವಿವಿಧ ಕೆಲಸ ಕಾರ್ಯ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಒಟ್ಟು ₹1.42 ಕೋಟಿ ಅನುದಾನ ನೀಡಿದ್ದರ ಬಗ್ಗೆ ತಾಲ್ಲೂಕು ಪಂಚಾಯಿತಿ ಇಒ ಆರ್.ವಿ.ದೊಡ್ಡಮನಿ ಮಾಹಿತಿ ನೀಡಿದ್ದು, ನಿರ್ಮಿತಿ ಕೇಂದ್ರದ ಯಾವೊಬ್ಬ ಅಧಿಕಾರಿ ಕಾಮಗಾರಿ ಪ್ರಗತಿ ಬಗ್ಗೆ ಮಾಹಿತಿ ನೀಡುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಇಒ ರಾಮಣ್ಣ ವಿ. ದೊಡ್ಡಮನಿ, ಯೋಜನಾಧಿಕಾರಿ ಎ.ಎಚ್.ಕೊಂಡಿಕೊಪ್ಪ ಸೇರಿದಂತೆ ಕೆಲವು ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-23-1589787905

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.