ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ನಾಯಕರು ಈಶ್ವರಪ್ಪ ಕೈಕಾಲು ಹಿಡಿದು ಟಿಕೆಟ್‌ ನೀಡಬೇಕು: ಶಿವಾನಂದ ಮುತ್ತಣ್ಣ

Published 24 ಮಾರ್ಚ್ 2024, 16:19 IST
Last Updated 24 ಮಾರ್ಚ್ 2024, 16:19 IST
ಅಕ್ಷರ ಗಾತ್ರ

ಗದಗ: ‘ರಾಜ್ಯದಲ್ಲಿ ಬಿಜೆಪಿಗೆ 25 ಸ್ಥಾನ ಗೆಲ್ಲಬೇಕಾದರೆ ಬಿಜೆಪಿ ನಾಯಕರು ಕೆ.ಎಸ್‌.ಈಶ್ವರಪ್ಪ ಅವರ ಮನೆಗೆ ಹೋಗಿ ಕೈ-ಕಾಲು ಹಿಡಿದು ಕೆ.ಇ.ಕಾಂತೇಶ್‌ಗೆ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡಬೇಕು. ಇಲ್ಲದಿದ್ದರೆ ಕುರುಬ ಸಮುದಾಯ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತದೆ’ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣನವರ ಎಚ್ಚರಿಕೆ ನೀಡಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ನಡೆದ ಕುರುಬ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ರಾಜ್ಯದ 31 ಜಿಲ್ಲೆಗಳ ಪೈಕಿ ಕುರುಬ ಸಮಾಜ ಈಶ್ವರಪ್ಪನವರ ಪರವಾಗಿ ಗಟ್ಟಿಧ್ವನಿ ಎತ್ತಿದ್ದು ಹಾವೇರಿ-ಗದಗ ಕ್ಷೇತ್ರದಲ್ಲಿ ಮಾತ್ರ. ರಾಜ್ಯದ ಹಲವು ಕ್ಷೇತ್ರದಲ್ಲಿ ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಟಿಕೆಟ್ ಕೊಡಿಸಿದ್ದಾರೆ. ಆದರೆ, ಈಶ್ವರಪ್ಪನವರ ಮಗನಿಗೆ ಯಾಕೆ ಟಿಕೆಟ್ ನೀಡಲಿಲ್ಲ’ ಎಂದು ಪ್ರಶ್ನಿಸಿದರು.

‘ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಾಸಕರಾಗಿದ್ದರೂ ಅವರಿಗೆ ಟಿಕೆಟ್ ನೀಡಿದ್ದು ಏಕೆ? ಇಡೀ ದೇಶದಲ್ಲಿ ಕುರುಬರಿಂದಲೇ ಹಿಂದುತ್ವ ಉಳಿದಿದೆ. ಹೀಗಿದ್ದಾಗ ಕುರುಬರಿಗೆ ಅನ್ಯಾಯ ಮಾಡಿದ್ದು ಎಷ್ಟು ಸರಿ? ಹಿಂದುತ್ವದ ಹೆಸರಿನಲ್ಲಿ ಹಿಂದುಳಿದ ವರ್ಗದವರನ್ನು ಬಿಜೆಪಿ ತುಳಿಯುತ್ತಿದೆ’ ಎಂದು ಆಕ್ರೋಶ ಹೊರ ಹಾಕಿದರು.

‘ಈಶ್ಭರಪ್ಪನವರನ್ನು ಹೊರಗಿಟ್ಟು 28 ಸ್ಥಾನಗಳನ್ನು ಗೆಲ್ಲುವ ತಾಕತ್ತು ಬಿಜೆಪಿಗೆ ಇಲ್ಲ. ಕುರುಬ ಸಮುದಾಯಕ್ಕೆ ಒಂದಾದರೂ ಟಿಕೆಟ್ ನೀಡಿದಿದ್ದರೆ ಬಿಜೆಪಿ ಅಭ್ಯರ್ಥಿಗಳು ಪ್ರಚಾರಕ್ಕೆ ಬಂದರೆ ಕುರುಬ ಸಮುದಾಯದವರು ಬಹಿಷ್ಕರಿಸಬೇಕು’ ಎಂದು ಕರೆ ನೀಡಿದರು.

‘ಕೆ.ಇ.ಕಾಂತೇಶ್ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ತಪ್ಪಿಸುವುದರಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕೈವಾಡವೂ ಇದೆ. ಹಿಂದುತ್ವದ ಹೆಸರಿನಲ್ಲಿ ಹಿಂದುಳಿದ ವರ್ಗದವರನ್ನು ಬಿಜೆಪಿ ತುಳಿಯುತ್ತಿದೆ’ ಎಂದು ಹರಿಹಾಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT