ಗದಗ: ಲಿಂಗೈಕ್ಯ ಸಿದ್ಧಲಿಂಗ ಮಹಾಸ್ವಾಮಿಗಳ ಏಳನೇ ಪುಣ್ಯಸ್ಮರಣೆ, ಮರಣವೇ ಮಹಾನವಮಿ ಆಚರಣೆ, ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ ಶುಕ್ರವಾರ ಬೆಳಿಗ್ಗೆ 10.30ಕ್ಕೆ ನಗರದ ತೋಂಟದ ಸಿದ್ಧಲಿಂಗ ಶ್ರೀಗಳ ಶಿವಾನುಭವ ಮಂಟಪದಲ್ಲಿ ನಡೆಯಲಿದೆ.

‘ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ’ಯನ್ನು ಈ ಬಾರಿ ಮರಣೋತ್ತರವಾಗಿ ಡಾ. ಎಂ.ಎಂ.ಕಲಬುರ್ಗಿ ಅವರಿಗೆ ನೀಡಲಾಗುವುದು. ಡಾ. ಎಂ.ಎಂ.ಕಲಬುರ್ಗಿ ಅವರ ಪತ್ನಿ ಉಮಾದೇವಿ ಎಂ.ಕಲಬುರ್ಗಿ ಪ್ರಶಸ್ತಿ ಸ್ವೀಕರಿಸುವರು. ಪ್ರಶಸ್ತಿಯು ₹5 ಲಕ್ಷ ನಗದು ಹಾಗೂ ಫಲಕ ಒಳಗೊಂಡಿದೆ.

ಇದೇವೇಳೆ, ತೋಂಟದ ಸಿದ್ಧರಾಮ ಸ್ವಾಮೀಜಿ ಕನ್ನಡಕ್ಕೆ ಅನುವಾದಿಸಿರುವ ‘ತೌಲನಿಕ ಧರ್ಮದರ್ಶನ’ ಗ್ರಂಥ ಲೋಕಾರ್ಪಣೆಗೊಳ್ಳಲಿದೆ.

ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಡಾ. ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಅಧ್ಯಕ್ಷ ಡಾ. ವೀರಣ್ಣ ರಾಜೂರ ಕೃತಜ್ಞತಾ ನುಡಿಗಳನ್ನಾಡುವರು. ಸಚಿವ ಎಚ್.ಕೆ.ಪಾಟೀಲ, ಮುಂಡರಗಿ ಬೈಲೂರು ತೋಂಟದಾರ್ಯ ಶಾಖಾ ಮಠದ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ, ಶಾಂತಲಿಂಗ ಸ್ವಾಮೀಜಿ, ಶಾಂತಲಿಂಗ ದೇಶಿಕೇಂದ್ರ ಸ್ವಾಮೀಜಿ, ಪ್ರಭು ಸ್ವಾಮೀಜಿ, ಕೋರಣೇಶ್ವರ ಸ್ವಾಮೀಜಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.