ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗದಗ ಜಿಲ್ಲೆಯಲ್ಲಿ ಮತ್ತೆ 6 ಮಂದಿಗೆ ಸೋಂಕು

Last Updated 13 ಜುಲೈ 2020, 17:34 IST
ಅಕ್ಷರ ಗಾತ್ರ

ಗದಗ: ಜಿಲ್ಲೆಯಲ್ಲಿ ಸೋಮವಾರ ಮತ್ತೆ 6 ಮಂದಿಗೆ ಕೋವಿಡ್‌–19 ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ‌322ಕ್ಕೆ ಏರಿಕೆಯಾಗಿದೆ.

ಸೋಮವಾರ ಐವರು ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಸದ್ಯ ಜಿಲ್ಲೆಯಲ್ಲಿ 134 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ 9 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಸೋಮವಾರ 26 ವರ್ಷದ ಯುವಕ (ಪಿ–38890), 22 ವರ್ಷದ ಯುವತಿ (ಪಿ–38892), 59 ವರ್ಷದ ಮಹಿಳೆಗೆ (ಪಿ–38894) ಸೋಂಕು ತಗುಲಿದೆ. ಜ್ವರದಿಂದ ಬಳಲುತ್ತಿದ್ದ ಇವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಇರುವುದು ದೃಢಪಟ್ಟಿದೆ. 31 ವರ್ಷದ ಪುರುಷನಿಗೆ (ಪಿ–38896) ಮತ್ತು 14 ವರ್ಷದ ಬಾಲಕನಿಗೆ (ಪಿ–38899) ಸೋಂಕಿತರ ಸಂಪರ್ಕದಿಂದ ಸೋಂಕು ತಗುಲಿದೆ.

ಅಂತರ ಜಿಲ್ಲಾ ಪ್ರಯಾಣದಿಂದ 24 ವರ್ಷದ ಯುವಕನಿಗೆ (ಪಿ–38900) ಸೋಂಕು ದೃಢಪಟ್ಟಿದೆ.

ಸೋಮವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಎಂ. ಸುಂದರೇಶಬಾಬು ಅವರು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರೊಂದಿಗೆ ವಿಡಿಯೊ ಸಂವಾದ ನಡೆಸಿದರು. ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು. ಜಿಲ್ಲೆಯ ಮಳೆ, ಬೆಳೆ , ಬೀಜ,ರಸಗೊಬ್ಬರ ಲಭ್ಯತೆಯ ಕುರಿತೂ ಅವರು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.

ಸಿಇಒ ಡಾ.ಆನಂದ ಕೆ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್ ಎನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT