ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗದಗ | ಎಸ್‌ಪಿ ನೇಮಗೌಡ ನಗರ ಸಂಚಾರ: ಪರಿಶೀಲನೆ

Published 4 ಜುಲೈ 2024, 14:23 IST
Last Updated 4 ಜುಲೈ 2024, 14:23 IST
ಅಕ್ಷರ ಗಾತ್ರ

ಗದಗ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್.ನೇಮಗೌಡ ಅವರು ಮಂಗಳವಾರ ಅವಳಿ ನಗರದ ಪ್ರಮುಖ ವೃತ್ತಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು.

ಮಳೆ ನೀರು ಸರಾಗ ಹರಿಯುವಂತೆ ಚರಂಡಿಗಳ ಸ್ವಚ್ಛತೆ, ರಸ್ತೆಯಲ್ಲಿನ ತಗ್ಗು ಗುಂಡಿಗಳ ಮುಚ್ಚುವಿಕೆ, ಉತ್ತಮ ಪಾರ್ಕಿಂಗ್ ವ್ಯವಸ್ಥೆ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿರುವ ಅಡೆತಡೆಗಳನ್ನು ನಿವಾರಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಕುರಿತು ಕ್ರಮ ಕೈಕೊಳ್ಳಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.

ಸ್ಥಳದಲ್ಲಿದ್ದ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದ ಅವರು, ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ ಕಲ್ಪಿಸಲು ಮತ್ತು ನಗರದ ಸಂಚಾರ ವ್ಯವಸ್ಥೆ ಸಮರ್ಪಕ ನಿರ್ವಹಣೆ ಹಾಗೂ ಕಾನೂನು ಸುವ್ಯವಸ್ಥೆಯ ಪರಿಣಾಮಕಾರಿ ನಿರ್ವಹಣೆ ದೃಷ್ಟಿಯಿಂದ ರಾತ್ರಿ ಮತ್ತು ಹಗಲು ಪೆಟ್ರೋಲಿಂಗ್ ನಡೆಸಲಾಗುತ್ತಿದೆ. ಅದೇರೀತಿ ಜಿಲ್ಲೆಯ ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಉತ್ತಮ ಕಾರ್ಯ ಆಗಬೇಕು’ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಜಿ.ಸಂಕದ ಹಾಗೂ ಡಿಎಸ್‌ಪಿ, ಸಿಪಿಐ, ಪಿಐ ಸೇರಿದಂತೆ ಪೊಲೀಸ್ ಇಲಾಖೆ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT