ಗುರುವಾರ , ಜನವರಿ 21, 2021
30 °C

ಸೆಕ್ಯುರಿಟಿ ಗಾರ್ಡ್ ಕೊಲೆ ಪ್ರಕರಣ: ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗದಗ: ಮುಂಡರಗಿ ತಾಲ್ಲೂಕಿನ ಗಂಗಾಪುರದಲ್ಲಿ ಇತ್ತೀಚೆಗೆ ಹತ್ಯೆಗೀಡಾಗಿದ್ದ ಸೆಕ್ಯುರಿಟಿ ಗಾರ್ಡ್ ಫಕೀರಪ್ಪ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಮುಂಡರಗಿ ತಾಲ್ಲೂಕಿನ ಶಿರನಹಳ್ಳಿ ಗ್ರಾಮದ ನಿವಾಸಿ ರಂಗಪ್ಪ ಬಂಧಿತ ಆರೋಪಿ.

ಕೊಲೆಯಾದ ವ್ಯಕ್ತಿ ಫಕೀರಪ್ಪ ಆರೋಪಿ ರಂಗಸ್ವಾಮಿಗೆ ದೂರದ ಸಂಬಂಧಿ. ಫಕೀರಪ್ಪ ತಳವಾರ ಶಿಂಗಟಾಲೂರು ಗ್ರಾಮದವನಾಗಿದ್ದು, ಗಂಗಾಪೂರ ಶುಗರ್ ಫ್ಯಾಕ್ಟರಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ನ.12ರಂದು ರಾತ್ರಿ ಫ್ಯಾಕ್ಟರಿಯ ಗೊಬ್ಬರ ತಯಾರಿಸುವ ಬ್ಯಾರಕ್‌ನಲ್ಲಿ ಮಲಗಿದ್ದಾಗ ಆರೋಪಿ ರಂಗಪ್ಪ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ ಎಂದು ಪ್ರಕರಣ ದಾಖಲಾಗಿದೆ.

‘ಆರೋಪಿ ರಂಗಪ್ಪ ಅಲಿಯಾಸ್‌ ರಂಗಸ್ವಾಮಿ ಗೌಂಡಿ ಕೆಲಸಗಾರ. ತನ್ನ ಹೆಂಡತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಕ್ಕಾಗಿ ಫಕೀರಪ್ಪನನ್ನು ಕೊಲೆ ಮಾಡಿರುವುದಾಗಿ ಹೇಳಿದ್ದಾನೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್ ಎನ್‌. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

 ’ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ನಡೆಯುತ್ತಿದೆ’ ಎಂದು ಅವರು ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು