ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಸ್ಕ್‌ ಧರಿಸದವರಿಂದ ₹6.68 ಲಕ್ಷ ದಂಡ ಸಂಗ್ರಹ

ಎಸ್ಪಿ ಯತೀಶ್‌ ಮಾಹಿತಿ
Last Updated 1 ಮೇ 2021, 7:56 IST
ಅಕ್ಷರ ಗಾತ್ರ

ಗದಗ: ಕೋವಿಡ್-19 ಎರಡನೇ ಅಲೆ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗಿದ್ದು, ಅದರ ಅನುಷ್ಠಾನಕ್ಕಾಗಿ ಜಿಲ್ಲೆಯ ಎಲ್ಲ ಠಾಣೆ, ವೃತ್ತ, ಉಪ ವಿಭಾಗದ ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್‌ ಎನ್‌. ತಿಳಿಸಿದ್ದಾರೆ.

ಕೋವಿಡ್‌ ಕರ್ಫ್ಯೂ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಒಟ್ಟು 5,493 (ಮಾಸ್ಕ್‌ ಧರಿಸದಿರುವುದು) ಮಂದಿ ವಿರುದ್ಧ ಪ್ರಕರಣ ದಾಖಲಿಸಿ ₹6.68 ಲಕ್ಷ ದಂಡ ವಸೂಲಿ ಮಾಡಲಾಗಿದೆ. ಅದೇರೀತಿ, ಕೋವಿಡ್‌ ಕರ್ಫ್ಯೂ ನಿಯಮ ಉಲ್ಲಂಘಿಸಿದ ಕಾರಣ 11 ಪ್ರಕರಣಗಳನ್ನು ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

‘ಸಾರ್ವಜನಿಕರು ಕೋವಿಡ್‌ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹೊರಗಡೆ ಬಂದಾಗ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು. ಸ್ಯಾನಿಟೈಸರ್ ಬಳಕೆ ಮಾಡುವ ಮೂಲಕ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು. ಕರ್ಫ್ಯೂ ಸಂದರ್ಭದಲ್ಲಿ ಸಾರ್ವಜನಿಕರು ವಾಹನಗಳನ್ನು ತೆಗೆದುಕೊಂಡು ಅನಗತ್ಯವಾಗಿ ಸಂಚರಿಸಬಾರದು’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT