ಗದಗ: ‘ಮಾರ್ಚ್ 18ರಿಂದ ಏ. 2ರವರೆಗೆ ನಡೆಯುವ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಕ್ರಮ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಎಸ್ಎಸ್ಎಲ್ಸಿ ಪರೀಕ್ಷೆ-1ರ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಒಟ್ಟು 61 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಯಾವುದೇ ಅಕ್ರಮಗಳು ನಡೆಯದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆ, ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ ಸೇರಿದಂತೆ ಮೂಲಸೌಲಭ್ಯಗಳು ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು ಪರೀಕ್ಷಾ ಅವಧಿಯಲ್ಲಿ ಯಾವುದೇ ಲೋಪದೋಷಗಳಾಗದಂತೆ ಕ್ರಮ ಜರುಗಿಸಬೇಕು’ ಎಂದು ಸೂಚಿಸಿದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರುಡಿ ಮಾತನಾಡಿ, ಎಸ್ಎಸ್ಎಲ್ಸಿ-1 ಪರೀಕ್ಷೆಯು ಮಾರ್ಚ್ 18ರಿಂದ ಆರಂಭಗೊಳ್ಳಲಿದ್ದು, ಒಟ್ಟು 17,146 ಮಂದಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಮೂಲಸೌಲಭ್ಯ ಒದಗಿಸಲು ಕ್ರಮ ವಹಿಸಲಾಗಿದೆ. ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಡೆಸಲು ಸಕಲ ಕ್ರಮ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಗಳ ಸುತ್ತ ಪೊಲೀಸ್ ಬಂದೋಬಸ್ತ್, ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಹೋಗಿ ಬರಲು ಅನುಕೂಲವಾಗುವಂತೆ ಸೂಕ್ತ ಸಾರಿಗೆ ವ್ಯವಸ್ಥೆ ಕುರಿತು ಚರ್ಚಿಸಲಾಯಿತು.

ಡಿವೈಎಸ್ಪಿ ಮಹಾಂತೇಶ ಸಜ್ಜನ, ಡಯಟ್ ಪ್ರಾಚಾರ್ಯ ಜೆ.ಎಂ.ಮುಂದಿನಮನಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಜರಿದ್ದರು.

ಎಸ್ಎಸ್ಎಲ್ಸಿ ಪರೀಕ್ಷೆ- 1 ವೇಳಾಪಟ್ಟಿ

ಮಾರ್ಚ್ 18ರಂದು ಬೆಳಿಗ್ಗೆ 10ಕ್ಕೆ ಪ್ರಥಮ ಭಾಷೆ (ಕನ್ನಡ ತೆಲಗು ಹಿಂದಿ ಮರಾಠಿ ತಮಿಳು ಉರ್ದು ಇಂಗ್ಲಿಷ್ ಇಂಗ್ಲಿಷ್ ಎನ್ಸಿಇಆರ್ಟಿ ಸಂಸ್ಕೃತ); ಮಾರ್ಚ್ 23ರಂದು ವಿಜ್ಞಾನ ಬೆಳಿಗ್ಗೆ 10ರಿಂದ ಮಧ್ಯಾಹ್ನ 1.15 ರಾಜ್ಯಶಾಸ್ತ್ರ- ಬೆಳಿಗ್ಗೆ 10ರಿಂದ ಮಧ್ಯಾಹ್ನ 1.15 ಹಿಂದೂಸ್ತಾನಿ ಸಂಗೀತ/ ಕರ್ನಾಟಕ ಸಂಗೀತ ಮಧ್ಯಾಹ್ನ 2ರಿಂದ ಸಂಜೆ 5.15ರವರೆಗೆ. ಮಾರ್ಚ್ 25ರಂದು ದ್ವಿತೀಯ ಭಾಷೆ ಇಂಗ್ಲಿಷ್ ಕನ್ನಡ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರಗೆ. ಮಾರ್ಚ್ 28ರಂದು ಗಣಿತ ಸಮಾಜಶಾಸ್ತ್ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1.15. ಮಾರ್ಚ್ 30ರಂದು ತೃತೀಯ ಭಾಷೆ (ಹಿಂದಿ ಎನ್ಸಿಇಆರ್ಟಿ) ಹಿಂದಿ ಕನ್ನಡ ಇಂಗ್ಲಿಷ್ ಅರೇಬಿಕ್ ಉರ್ದು ಸಂಸ್ಕೃತ ಕೊಂಕಣಿ ತುಳು ಮರಾಠಿ) ಬೆಳಿಗ್ಗೆ 10ರಿಂದ ಮಧ್ಯಾಹ್ನ 1. ಎನ್ಎಸ್ಕ್ಯುಎಫ್ ವಿಷಯಗಳು: ಮಾಹಿತಿ ತಂತ್ರಜ್ಞಾನ ರಿಟೇಲ್ ಅಟೋಮೊಬೈಲ್ ಬ್ಯೂಟಿ ಆ್ಯಂಡ್ ವೆಲ್ನೆಸ್ ಅಪಾರೆಲ್ ಮೇಡ್ ಆಪ್ಸ್ ಆ್ಯಂಡ್ ಹೋಮ್ ಫರ್ನಿಷಿಂಗ್ ಎಲೆಕ್ಟ್ರಾನಿಕ್ಸ್ ಆ್ಯಂಡ್ ಹಾರ್ಡ್ವೇರ್- ಬೆಳಿಗ್ಗೆ 10ರಿಂದ ಮಧ್ಯಾಹ್ನ 12.15ರವರೆಗೆ. ಏಪ್ರಿಲ್ 1ರಂದು ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್– IV ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಎಂಜಿನಿಯರಿಂಗ್- IV ಅರ್ಥಶಾಸ್ತ್ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1.15ರವರೆಗೆ. ಏಪ್ರಿಲ್ 2ರಂದು ಸಮಾಜ ವಿಜ್ಞಾನ ಬೆಳಿಗ್ಗೆ 10ರಿಂದ ಮಧ್ಯಾಹ್ನ 1.15ರವರೆಗೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.