ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಗಳ ಸುತ್ತ ಪ್ರತಿಬಂಧಕಾಜ್ಞೆ ಜಾರಿ

Published 21 ಮಾರ್ಚ್ 2024, 16:17 IST
Last Updated 21 ಮಾರ್ಚ್ 2024, 16:17 IST
ಅಕ್ಷರ ಗಾತ್ರ

ಗದಗ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್‌ 25ರಿಂದ ಏಪ್ರಿಲ್ 6ರ ವರೆಗೆ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1.45ರ ವರೆಗೆ ನಡೆಸಲಿದ್ದು, ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲೆಯ 60 ಪರೀಕ್ಷಾ ಕೇಂದ್ರಗಳಲ್ಲಿ ಅಂದಿನ ದಿನ ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಆದೇಶಿಸಿದ್ದಾರೆ.

ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್ ಅಂಗಡಿ, ಬುಕ್‍ಸ್ಟಾಲ್, ಫೋಟೊ ಕಾಪಿಯರ್‌ಗಳನ್ನು ಬಂದ್‌ ಮಾಡಲು ಆದೇಶಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್ ಮತ್ತು ಇತರೆ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.

ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಬರುವ ಸಮಯ ಮತ್ತು ಹೊರ ಹೋಗುವ ಸಮಯದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು, ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT