ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಪ್ರೌಢಶಾಲೆ, ವಿ.ಜಿ.ಲಿಂಬಿಕಾಯಿ ಪ್ರೌಢಶಾಲೆ, ಎಸ್.ಎಫ್.ಎಸ್. ಪ್ರೌಢಶಾಲೆ, ತಾಲ್ಲೂಕಿನ ಪೇಠಾಲೂರು ಗ್ರಾಮದ ಹಾಲಶಿವಯೋಗಿಶ್ವರ ಪ್ರೌಢಶಾಲೆ, ಡಂಬಳ ಗ್ರಾಮದ ಜಗದ್ಗುರು ತೋಂಟದಾರ್ಯ ಪ್ರೌಢಶಾಲೆ, ಬಾಗೇವಾಡಿ ಗ್ರಾಮದ ಬಸವೇಶ್ವರ ಪ್ರೌಢಶಾಲೆ, ಕದಾಂಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆ ಹಾಗೂ ಕೊರ್ಲಹಳ್ಳಿ ಗ್ರಾಮದ ಆದರ್ಶ ವಿದ್ಯಾಲಯದಲ್ಲಿ ಪರೀಕ್ಷಾ ಕೇಂದ್ರ ತೆರೆಯಲಾಗಿತ್ತು.

ತಾಲ್ಲೂಕಿನ ವಿವಿಧ ಶಾಲೆಗಳಿಂದ ಪರೀಕ್ಷೆಗೆ ನೋಂದಾಯಿಸಿಕೊಂಡ ಒಟ್ಟು 2,182 ವಿದ್ಯಾರ್ಥಿಗಳಲ್ಲಿ ಬುಧವಾರ ನಡೆದ ಕನ್ನಡ ಭಾಷಾ ಪರೀಕ್ಷೆಗೆ ಒಟ್ಟು 2,086 ವಿದ್ಯಾರ್ಥಿಗಳು ಹಾಜರಾಗಿದ್ದರು. 96 ವಿದ್ಯಾರ್ಥಿಗಳು ಗೈರಾಗಿದ್ದರು. ತಾಲ್ಲೂಕಿನ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಹಾಗೂ ಸುವ್ಯವಸ್ಥೆಯಿಂದ ಪರೀಕ್ಷೆಗಳು ಜರುಗಿದವು. ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಪೊಲೀಸರು ಸೂಕ್ತ ಬಂದೋಬಸ್ತ್ ವಹಿಸಿದ್ದರು.

ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿ ರವಿ ಪ್ರಕಾಶ, ತಹಶೀಲ್ದಾರ್ ಎರ್ರಿಸ್ವಾಮಿ ಪಿ.ಎಸ್., ಪ್ರವಾಸೋದ್ಯಮ ಇಲಾಖೆಯ ಶರಣು ಗೋಗೇರಿ, ಬಿಇಒ ಗಾಧರ ಅಣ್ಣಿಗೇರಿ ಹಾಗೂ ಮತ್ತಿತರ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.