ಗುರುವಾರ , ಸೆಪ್ಟೆಂಬರ್ 16, 2021
24 °C

ಎಸ್ಸೆಸ್ಸೆಲ್ಸಿ ಫಲಿತಾಂಶ: ಗದಗ ಜಿಲ್ಲೆಗೆ ‘ಎ’ ಗ್ರೇಡ್‌, 21ನೇ ಸ್ಥಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗದಗ: 2020–21ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಗದಗ ಜಿಲ್ಲೆ ‘ಎ’ ಗ್ರೇಡ್‌ನೊಂದಿಗೆ 21ನೇ ಸ್ಥಾನ ಪಡೆದುಕೊಂಡಿದೆ.

ಗಜೇಂದ್ರಗಡದ ರಾಯಭಾಗಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಕಿರಣ್‌ ತಾಳಿಕೋಟೆ 625ಕ್ಕೆ 625 ಅಂಕಗಳನ್ನು ಪಡೆದುಕೊಂಡಿದ್ದಾನೆ.

‘ಈ ಬಾರಿ ಜಿಲ್ಲೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕುಳಿತಿದ್ದ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಗದಗ ಜಿಲ್ಲೆ 21ನೇ ಸ್ಥಾನದಲ್ಲಿದ್ದು ‘ಎ’ ಗ್ರೇಡ್‌ನಲ್ಲಿದೆ. ‘ಎ’ ಪ್ಲಸ್‌ ಪಡೆದವರ ಸಂಖ್ಯೆಯಲ್ಲಿ ಶೇ 20, ‘ಎ’ ಶ್ರೇಣಿ ಪಡೆದವರ ಸಂಖ್ಯೆಯಲ್ಲಿ ಶೇ 20, ಪ್ರಥಮ ಶ್ರೇಣಿ ಪಡೆದವರ ಸಂಖ್ಯೆಯಲ್ಲಿ ಶೇ 20 ಹಾಗೂ ಒಟ್ಟು ಉತ್ತೀರ್ಣರಾದವರ ಸಂಖ್ಯೆಯಲ್ಲಿ ಶೇ 40 ಪರಿಗಣಿಸಿ ಸ್ಥಾನ ನೀಡಲಾಗಿದೆ’ ಎಂದು ಡಿಡಿಪಿಐ ಬಸವಲಿಂಗಪ್ಪ ಜಿ.ಎಂ. ತಿಳಿಸಿದ್ದಾರೆ. 

ಜುಲೈ 19ರಂದು ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 16,216 ಮಂದಿ ವಿದ್ಯಾರ್ಥಿಗಳ ಪೈಕಿ 16,113 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮೊದಲ ದಿನ ನಡೆದ ಪರೀಕ್ಷೆಗೆ 103 ಮಂದಿ ಗೈರಾಗಿದ್ದರು.

ಜುಲೈ 22ರಂದು ನಡೆದ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 15,619 ಮಂದಿ ವಿದ್ಯಾರ್ಥಿಗಳ ಪೈಕಿ 15,586 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಎರಡನೇ ದಿನ ನಡೆದ ಪರೀಕ್ಷೆಗೆ 33 ಮಂದಿ ವಿದ್ಯಾರ್ಥಿಗಳು ಗೈರಾಗಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು