ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮೃದ್ಧಿಗೆ ನ್ಯಾಯಾಧೀಶೆ ಆಗುವ ಗುರಿ

ಎಸ್‌ಎಸ್‌ಎಲ್‌ಸಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
Published 12 ಮೇ 2024, 14:31 IST
Last Updated 12 ಮೇ 2024, 14:31 IST
ಅಕ್ಷರ ಗಾತ್ರ

ಗದಗ: ‘ಮುಂದಿನ ದಿನಗಳಲ್ಲಿ ಕಾನೂನು ಶಿಕ್ಷಣ ಅಧ್ಯಯನ ಮಾಡಿ ನ್ಯಾಯಾಧೀಶೆ ಆಗುವ ಗುರಿ ಹೊಂದಿದ್ದೇನೆ’ ಎಂದು ವಿದ್ಯಾರ್ಥಿನಿ ಸಮೃದ್ಧಿ ಸಿದ್ಲಿಂಗ್‌ ತಿಳಿಸಿದಳು.

ಹೆಲ್ತ್‌ಕ್ಯಾಂಪ್‌ನಲ್ಲಿರುವ ಅವರ ಮನೆಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ ಅವರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

‘ಪ್ರಾಮಾಣಿಕ ಪ್ರಯತ್ನ ಹಾಗೂ ಪರಿಶ್ರಮದಿಂದ ಸಾಧನೆ ಸಾಧ್ಯವಾಗುತ್ತದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 622 ಅಂಕಗಳನ್ನು ಪಡೆಯಲು ಆ ಸೂತ್ರವೇ ಕಾರಣವಾಯಿತು. ನನ್ನ ಈ ಸಾಧನೆಗೆ ಶಾಲೆಯ ಶಿಕ್ಷಕರ ಮಾರ್ಗದರ್ಶನ ಮತ್ತು ತಂದೆ ತಾಯಿಗಳ ಪ್ರೋತ್ಸಾಹ ನೆರವಾಯಿತು. ಮುಂದೆ ಕಾನೂನು ಶಿಕ್ಷಣ ಪಡೆದು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಿ, ನ್ಯಾಯಾಧೀಶೆ ಆಗುವ ಗುರಿ ಹೊಂದಿರುವೆ’ ಎಂದು ತಿಳಿಸಿದಳು.

ವಿದ್ಯಾರ್ಥಿನಿಯನ್ನು ಸನ್ಮಾನಿಸಿದ ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ ಮಾತನಾಡಿ, ‘ವಿದ್ಯೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅದು ಯಾರೊಬ್ಬರ ಸ್ವತ್ತಲ್ಲ ಹಾಗೂ ಯಾವ ಜಾತಿಗೂ ಸೀಮಿತವಲ್ಲ’ ಎಂದು ಹೇಳಿದರು.

ಡಿಡಿಪಿಐ ಎಂ.ಎ.ರೆಡ್ಡೇರ ಮಾತನಾಡಿ, ‘ಕಳೆದ ವರ್ಷ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಗದಗ ಜಿಲ್ಲೆ ರಾಜ್ಯ ಮಟ್ಟದಲ್ಲಿ 25ನೇ ಸ್ಥಾನದಲ್ಲಿತ್ತು. ಈ ಬಾರಿ 17ನೇ ಸ್ಥಾನಕ್ಕೆ ಬಂದಿರುವುದು ಸಂತೋಷದ ಸಂಗತಿ’ ಎಂದರು.

ಜಿಲ್ಲೆಯು ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಈ ಸಾಧನೆ ಮಾಡಲು ಎಲ್ಲಾ ಸಹಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರ ಶ್ರಮ ಕಾರಣವಾಗಿದೆ. ಮುಂಬರುವ ದಿನಗಳಲ್ಲಿ ಗದಗ ಜಿಲ್ಲೆಯನ್ನು ಹತ್ತನೇ ಸ್ಥಾನಕ್ಕೆ ತರುವಲ್ಲಿ ಈಗಿನಿಂದಲೇ ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು.

ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಬುರುಡಿ, ಸಹ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಎಚ್.ಕಡಿವಾಳ, ತಾಲ್ಲೂಕು ಅಧ್ಯಕ್ಷ ಬಿ.ಎಫ್. ಪೂಜಾರ ವಿದ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಿದರು.

ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ.ನಡವಿನಮನಿ, ಶಿಕ್ಷಣ ಇಲಾಖೆಯ ಸಿಬ್ಬಂದಿ, ಹೆಲ್ತ್‌ ಕ್ಯಾಂಪ್ ನಿವಾಸಿಯಾದ ಅರವಿಂದ ಹುಲ್ಲೂರ ಹಾಗೂ ಓಣಿಯ ಹಿರಿಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT