ನರೇಗಲ್: ಕಾಂಗ್ರೆಸ್ ಪಕ್ಷ ದೇಶದ ಯುವಕರಿಗೆ ಮೊದಲ ಆದ್ಯತೆ ನೀಡುತ್ತದೆ ಅವರಿಗೆ ಅನೇಕ ರೀತಿಯಲ್ಲಿ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಿಕೊಡುತ್ತದೆ. ಆದ್ದರಿಂದ ಯುವ ಜನರ ಎಲ್ಲ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಈಗ ನಡೆಯುತ್ತಿರುವ ರಾಜ್ಯ ಯುವ ಕಾಂಗ್ರೆಸ್ ಚುನಾವಣೆ ಮಹತ್ವದ್ದಾಗಿದೆ ಎಂದು ಅಭ್ಯರ್ಥಿ ಅಕ್ಷಯ ಐ. ಪಾಟೀಲ ಹೇಳಿದರು.
ನರೇಗಲ್ ಪಟ್ಟಣದ 3ನೇ ವಾರ್ಡ್‌ನ ಆಶ್ರಯ ಕಾಲೋನಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕಾಗಿ ಆನ್‌ಲೈನ್‌ನಲ್ಲಿ ಆರಂಭವಾಗಿರುವ ಮತದಾನ ಪ್ರಕ್ರಿಯೆಯ ಅಂಗವಾಗಿ ಭಾನುವಾರ ನಡೆದ ಮತದಾನ ಪ್ರಕ್ರಿಯೆಯಲ್ಲಿ ಮಾತನಾಡಿದರು.
ಆನ್‌ಲೈನ್ ಮತದಾನ ಪ್ರಕ್ರಿಯೆ ಭರದಿಂದ ಸಾಗಿದ್ದು, ಪ್ರತಿ ಗ್ರಾಮದಲ್ಲೂ ಉತ್ಸಾಹ ಮತ್ತು ಪೈಪೋಟಿಯಿಂದ ಯುವಕರು ಮತದಾನ ಮಾಡುತ್ತಿರುವುದು ನೋಡಿದರೆ ಸಂತೋಷವಾಗುತ್ತದೆ ಎಂದರು.
ಮೊಬೈಲ್ ಬಳಕೆ ಮಾಡಿಕೊಂಡು ಮತದಾನ ಮಾಡುವ ಅಗತ್ಯವಿರುವ ಕಾರಣ ಮತದಾರರಿಗೆ ಮಾಹಿತಿ ನೀಡಲು ಪ್ರತಿ ಗ್ರಾಮದಲ್ಲೂ ಪಕ್ಷದ ಯುವಕರು ಸ್ವಯಂಸೇವಕರಾಗಿ ಕೆಲಸ ಮಾಡುತ್ತಿದ್ದಾರೆ. 18 ರಿಂದ 35 ವರ್ಷದೊಳಗಿನ ಯುವಕರು ಮೊಬೈಲ್ ನಲ್ಲಿ ‘ಐವೈಸಿ’ಆ್ಯಪ್ ಡೌನ್ಲೋಡ್ ಮಾಡಿಕೊಂಡು ಚುನಾವಣೆ ಆಯೋಗ ನೀಡಿರುವ ಗುರುತಿನ ಚೀಟಿಯನ್ನು ಹೊಂದಿರುವವರು ಮತ ನೀಡಲು ಅವಕಾಶ ಇದೆ. ಪ್ರತಿ ಮತವು ಕೂಡ ನಿರ್ಣಾಯಕ ಪಾತ್ರ ವಹಿಸುವ ಕಾರಣ ಆ. 20 ರ ಒಳಗೆ ಉದಾಸೀನ ಮಾಡದೇ ಅಮೂಲ್ಯ ಮತವನ್ನು ತಪ್ಪದೇ ಚಲಾಯಿಸಬೇಕು ಎಂದು ಹೇಳಿದರು.
ಯುವಕರು ದೇಶ ಕಟ್ಟುವ ಮನೋಭಾವ ಬೆಳೆಸಿಕೊಂಡು ರಾಜಕೀಯಕ್ಕೆ ಬರುತ್ತಾರೋ ಆಗ ದೇಶ ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಮುನ್ನಡೆಯಲು ಸಾಧ್ಯವಾಗುತ್ತದೆ. ಪಕ್ಷವನ್ನು ಬೇರು ಮಟ್ಟದಿಂದ ಬೆಳೆಸಲು ಯುವ ಶಕ್ತಿ ಮುಂದೆಬರಬೇಕು ಎಂದರು. ಕಾಂಗ್ರೆಸ್ ಪಕ್ಷವು ಯುವಕರಿಗೆ ರಾಜಕೀಯದ ಜೊತೆಗೆ ಅವರಿಗೆ ಸೂಕ್ತ ಮಾರ್ಗದರ್ಶನ, ತರಬೇತಿ, ಸಹಾಯ, ಸ್ವಯಂ ಉದ್ಯೋಗಕ್ಕೆ ಅವಕಾಶ, ನೆರವು ನೀಡಲಾಗುತ್ತದೆ. ಇದರಿಂದ ದೇಶದ ಅಭಿವೃದ್ದಿಗೆ ನಮ್ಮ ಪಕ್ಷ ಯುವ ಶಕ್ತಿಗೆ ಆಧಾರವಾಗಿ ನಿಲ್ಲುತ್ತದೆ ಎಂದು ತಿಳಿಸಿದರು.
3ನೇ ವಾರ್ಡಿನಲ್ಲಿ 20ಕ್ಕೂ ಹೆಚ್ಚು ಯುವಕರು ಐವೈಸಿ ಮೊಬೈಲ್ ಆ್ಯಪ್ ಮೂಲಕ ಮತದಾನ ಮಾಡಿದರು.
ನರೇಗಲ್ ಕಾಂಗ್ರೆಸ್ ಶಹರ ಘಟಕದ ಅಧ್ಯಕ್ಷ ಶಿವನಗೌಡ ಪಾಟೀಲ, ಅಕ್ಷಯ ಪಾಟೀಲ ಅಭಿಮಾನಿ ಬಳಗದ ಅಧ್ಯಕ್ಷ ಮೈಲಾರಪ್ಪ ವೀ. ಚಳ್ಳಮರದ, ಸಂತೋಷ ಹನಮಸಾಗರ, ಅಲ್ಲಾಬಕ್ಷಿ ನದಾಫ್, ಕಳಕನಗೌಡ ಪೊಲೀಸ್‌ಪಾಟೀಲ, ಶೇಖಪ್ಪ ಕೆಂಗಾರ, ಸದ್ದಾಂ ನಶೇಖಾನ್, ಪ್ರಕಾಶ ಪಾದಗಟ್ಟಿ, ಸಮೀರ ಗೌಡರ, ಮಹೇಶ ಧಡೆಸೂರಮಠ, ಸಮೀರ ನದಾಫ್, ಮೌಲಾಸಾಬ್ ನಶೇಖಾನ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.