ಮುಂಡರಗಿ: ‘ಶಿಕ್ಷಣವು ಬಹುದೊಡ್ಡ ಶಕ್ತಿಯಾಗಿದ್ದು, ಬಡವ, ಶ್ರೀಮಂತರೆನ್ನದೆ ಎಲ್ಲ ವರ್ಗಗಳ ಜನರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಉತ್ತಮ ಶಿಕ್ಷಣ ಕೊಡಿಸಬೇಕು. ಬಡ ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಪಾಲಕರು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉದಯಕುಮಾರ ಎಲಿವಾಳ ತಿಳಿಸಿದರು.

ಕೇಂದ್ರ ಸರ್ಕಾರದ ಧರ್ತಿ ಆಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನದ ಅಂಗವಾಗಿ ಮಂಗಳವಾರ ತಾಲ್ಲೂಕಿನ ಶಿಂಗಟಾಲೂರದಲ್ಲಿ ಪರಿಶಿಷ್ಟ ಪಂಗಡದ ಜನತೆಗಾಗಿ ಹಮ್ಮಿಕೊಂಡಿದ್ದ ಜನ್ ಭಾಗಿಧಾರಿ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಪಟ್ಟಣವು ಸೇರಿದಂತೆ ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಬಾಲಕ, ಬಾಲಕಿಯರಿಗಾಗಿ ಪ್ರತ್ಯೇಕ ವಸತಿ ನಿಲಯಗಳಿದ್ದು, ಅಲ್ಲಿ ಮಕ್ಕಳಿಗೆ ಉಚಿತವಾಗಿ ಎಲ್ಲ ಸೌಲಭ್ಯಗಳನ್ನು ನೀಡಲಾಗುತ್ತದೆ. ಈಗಾಗಲೇ ವಸತಿ ನಿಲಯಕ್ಕೆ ಅರ್ಜಿ ಕರೆಯಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು’ ಎಂದು ತಿಳಿಸಿದರು.

ಕೃಷಿ ಇಲಾಖೆಯ ಹಿರಿಯ ಅಧಿಕಾರಿ ಶಿವಮೂರ್ತಿ ನಾಯ್ಕ ಮಾತನಾಡಿ, ‘ಕೃಷಿ ಕಾಯಕದಲ್ಲಿ ತೊಡಗುವ ಪರಿಶಿಷ್ಟ ಪಂಗಡಗಳ ರೈತರು ಹಾಗೂ ರೈತ ಮಹಿಳೆಯರಿಗೆ ಕೃಷಿ ಇಲಾಖೆಯ ಅಡಿಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ. ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ವಿವಿಧ ಯೋಜನೆಗಳಡಿ ರಿಯಾಯಿತಿ ಸೇರಿದಂತೆ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಅರ್ಹರು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

ನಿಲಯ ಪಾಲಕ ಶ್ರೀಕಾಂತ ಅರಹುಣಸಿ, ಕುಬೇರನಾಯ್ಕ, ಯಲ್ಲಪ್ಪ ನಾಗಮ್ಮನವರ, ಶಂಕ್ರಪ್ಪ ಗೋಣೆಪ್ಪನವರ, ಸೂಫಿಯಾ ಬೇಗಂ, ಬಾಬುಸಾಬ್, ಮಂಜುಳಾ ಲಂಕೆಪ್ಪನವರ, ವೀರಯ್ಯ ಅಳವಂಡಿಮಠ, ಪಕೀರಪ್ಪ ಹಾರೋಗೇರಿ, ಶಶಿಕಲಾ ತಳವಾರ, ಯಲ್ಲಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-23-2072020204

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.