ಗಜೇಂದ್ರಗಡ: ಸಮೀಪದ ಸೂಡಿ ಗ್ರಾಮದಲ್ಲಿ ಭಾನುವಾರ ವೀರಶೈವ ಧರ್ಮಪೀಠಗಳ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಅದ್ದೂರಿಯಾಗಿ ನಡೆಯಲಿದೆ.

ಗ್ರಾಮದ ಜುಕ್ತಿ ಹಿರೇಮಠದ 50ನೇ ವರ್ಷದ ರಥೋತ್ಸವದ ನಿಮಿತ್ಯ ನೂತನ ರಥದ ಲೋಕಾರ್ಪಣೆ ಅಂಗವಾಗಿ ಮೇ 6 ರಂದು ಆರೋಗ್ಯ ಸಂವರ್ಧನಾ ಸಮಾರಂಭ, 7 ರಂದು ಕೃಷಿ ಋಷಿಯ ನೆನಹು, 8 ರಂದು ಮಹಿಳಾ ಜಾಗೃತಿ ಸಮಾರಂಭ ಹಾಗೂ ಉಡಿ ತುಂಬುವ ಕಾರ್ಯಕ್ರಮ ಹಾಗೂ 9 ರಂದು ಯುವ ಜಾಗೃತಿ ಮತ್ತು ಹಿರಿಯ ನಾಗರಿಕರ ಸಂರಕ್ಷಣಾ ಸಮಾವೇಶ ನಡೆದಿವೆ.

10ರಂದು ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ, ಉಜ್ಜಯಿನಿ ಸದ್ಧರ್ಮ ಪೀಠದ ಸಿದ್ದಲಿಂಗ ರಾಜದೇಶಿಕೇಂದ್ರ ಸ್ವಾಮೀಜಿ, ಶ್ರೀಶೈಲ ಪೀಠದ ಚನ್ನಸಿದ್ದರಾಮ ಸ್ವಾಮೀಜಿ, ವಾರಣಾಸಿ ಪೀಠದ ಚಂದ್ರಶೇಖರ ಸ್ವಾಮೀಜಿ, ವಾರಣಾಸಿ ಪೀಠದ ಮಲ್ಲಿಕಾರ್ಜುನ ವಿಶ್ವರಾಧ್ಯ ಸ್ವಾಮೀಜಿಗಳ ಅಡ್ಡಪಲ್ಲಕ್ಕಿ ಮಹೋತ್ಸವ ಬೆಳಿಗ್ಗೆ 9ಕ್ಕೆ ಸೂಡಿ ಹೊರ ವಲಯದಲ್ಲಿ ನಿರ್ಮಿಸಿರುವ ಬೃಹತ್ ಮಾನವ ಧರ್ಮ ಮಂಟಪದಿಂದ ಪ್ರಾರಂಭಗೊಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜುಕ್ತಿ ಹಿರೇಮಠದ ಆವರಣದಲ್ಲಿ ಮಂಗಲಗೊಳ್ಳಲಿದೆ.

ಮಧ್ಯಾಹ್ನ 12 ಗಂಟೆಗೆ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಜುಕ್ತಿಹಿರೇಮಠದ ಕೊಟ್ಟೂರ ಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಹಾಗೂ ಸಿಂದಗಿ ಸಾರಂಗಿ ದೇವರಮಠದ ಪ್ರಭುಸಾರಂಗದೇವ ಸ್ವಾಮೀಜಿ, ಮುಕ್ತಿಮಂದಿರದ ವಿಮಲ ರೇಣುಕ ವೀರಮುಕ್ತಿಮುನಿ ಸ್ವಾಮೀಜಿ, ಮೈಸೂರು-ಬನ್ನಿಕೊಪ್ಪದ ಅರಮನೆ ಜಪದಕಟ್ಟಿಮಠದ ಸುಜ್ಞಾನದೇವ ಸ್ವಾಮೀಜಿ, ಮಸೂತಿ ಜಗದೀಶ್ವರ ಹಿರೇಮಠದ ಪ್ರಭುಕುಮಾರ ಸ್ವಾಮೀಜಿ ಉಪಸ್ಥಿಯಲ್ಲಿ ಜನಜಾಗೃತಿ ಧರ್ಮ ಸಮ್ಮೇಳನ ನಡೆಯಲಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಧರ್ಮ ಸಮ್ಮೇಳನ ಉದ್ಘಾಟಿಸಲಿದ್ದು, ದಾನಿಗಳ ನಾಮಫಲಕವನ್ನು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಅನಾವರಣಗೊಳಿಸಲಿದ್ದಾರೆ. ಹಾವೇರಿ- ಗದಗ ಸಂಸದ ಬಸವರಾಜ ಬೊಮ್ಮಾಯಿ ಗ್ರಂಥ ಬಿಡುಗಡೆ ಮಾಡಲಿದ್ದಾರೆ. ಅಖಿಲ ಭಾರತ ವೀರಶೈವ- ಲಿಂಗಾಯತ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಶಂಕರ ಬಿದರಿ ರಥದ ಉದ್ಘಾಟನೆ ನೆರವೇರಿಸಲಿದ್ದಾರೆ.

ಧಾರವಾಡದ ಭಾಷಾ ವಿಜ್ಞಾನಿ ಸಂಗಮೇಶ ಸವದತ್ತಿಮಠ ಅವರಿಗೆ ‘ಭಾಷಾ ಭಾಸ್ಕರ ಪ್ರಶಸ್ತಿ’ ಪ್ರದಾನ ನಡೆಯಲಿದೆ. 25 ಸಾವಿರ ಜನರಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ. ಸೂಡಿ ಗ್ರಾಮದಲ್ಲಿ 2022ರಲ್ಲಿ ರಂಭಾಪುರಿ ಹಾಗೂ ಕೇದಾರದ ಜಗದ್ಗುರುಗಳ ಅಡ್ಡಪಲ್ಲಕ್ಕಿ ಕಾರ್ಯಕ್ರಮ ನಡೆದಿತ್ತು. ಐದು ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ನಡೆಯುತ್ತಿರುವುದು ಇದೇ ಮೊದಲು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-23-41042068

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.