ಶಿರಹಟ್ಟಿ: ‘ರೈತರು ಕೇಂದ್ರ ಸರ್ಕಾರದ ಬೆಂಬಲ ಬೆಲೆ ಹೆಸರು ಖರೀದಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ರೈತರಿಗೆ ಬೇಕಾಗುವ ದಾಖಲೆ ಹಾಗೂ ಜಿಪಿಎಸ್ ಬಗ್ಗೆ ಅಧಿಕಾರಿಗಳು ಜಾಗೃತಿಗೊಳಿಸಬೇಕು’ ಎಂದು ಶಾಸಕ ಚಂದ್ರು ಲಮಾಣಿ ಹೇಳಿದರು.

ಸ್ಥಳೀಯ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ವತಿಯಿಂದ ಮಂಗಳವಾರ ಹೆಸರು ಬೆಳೆ ಖರೀದಿ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು.

ರೈತರಿಗೆ ಪ್ರತಿ ಕ್ವಿಂಟಲ್ಗೆ ₹8768 ದರ ನಿಗದಿ ಪಡಿಸಲಾಗಿದ್ದು, ಒಂದು ಎಕರೆಗೆ 3 ಕ್ವಿಂಟಲ್ ರಂತೆ ಒಬ್ಬ ರೈತರು 15 ಕ್ವಿಂಟಲ್ ಹೆಸರು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲು ಅವಕಾಶ ನೀಡಲಾಗಿದೆ. ರೈತರು ಹೆಚ್ಚಾಗಿ ಗೋವಿನಜೋಳ ಬೆಳೆದಿದ್ದು, ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ಮನವಿ ಸಲ್ಲಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಗೋವಿನಜೋಳ ಖರೀದಿ ಕೇಂದ್ರ ಆರಂಭಿಸಲು ಅನುಮತಿ ನೀಡಿದ್ದು, ರಾಜ್ಯ ಸರ್ಕಾರ ಅನುಮತಿ ನೀಡಬೇಕಿದೆ’ ಎಂದರು.

ಈ ವೇಳೆ ತಹಶೀಲ್ದಾರ್ ಕೆ. ರಾಘವೇಂದ್ರ ರಾವ್, ರಾಮಣ್ಣ ಕಂಬಳಿ, ನಾಗರಾಜ ಲಕ್ಕುಂಡಿ, ಫಕೀರೇಶ ರಟ್ಟಿಹಳ್ಳಿ, ದೀಪು ಕಪ್ಪತ್ತನವರ, ಜಗದೀಶ ಸ್ವಾಮಿ, ಪರಶುರಾಮ ಡೊಂಕಬಳ್ಳಿ, ಚೆನ್ನವೀರಪ್ಪ ಕಲ್ಯಾಣಿ, ನಂದಾ ಪಲ್ಲೇದ, ಅಕ್ಬರ್ ಯಾದಗಿರಿ, ಶಿವಣ್ಣ ಅಡರಕಟ್ಟಿ, ಬಸವರಾಜ ದಿವಟರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.