ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯರ ಆರೋಗ್ಯದೆಡೆಗೆ ಕಾಳಜಿ ವಹಿಸಿ: ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಶೋಭಾ ಮೇಟಿ

Last Updated 25 ಸೆಪ್ಟೆಂಬರ್ 2020, 1:53 IST
ಅಕ್ಷರ ಗಾತ್ರ

ಗದಗ: ‘ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವುದರಿಂದ ಪ್ರತಿಯೊಬ್ಬರೂ ಮಾಸ್ಕ್ ಧರಿಸಿ, ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು. ಮಕ್ಕಳು ಮತ್ತು ವಯೋವೃದ್ಧರ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು’ ಎಂದು ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷೆ ಶೋಭಾ ಮೇಟಿ ಹೇಳಿದರು.

ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಗದಗ ಜಿಲ್ಲಾ ಪಂಚಾಯ್ತಿ ಸಹಯೋಗದಲ್ಲಿ ಮುಂಡರಗಿ ತಾಲ್ಲೂಕಿನ ಶಿಂಗಟಾಲೂರು, ಹೆಸರೂರು ಮತ್ತು ಬಿದ್ರಳ್ಳಿ ಗ್ರಾಮಗಳಲ್ಲಿ ನಡೆದ ಸಂಜೀವಿನಿ ಮಹಿಳಾ ಸಂಘಗಳ ಬಲವರ್ಧನೆ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಜಿಲ್ಲಾ ಪಂಚಾಯ್ತಿಯು ನರೇಗಾ ಯೋಜನೆಯಡಿ ದುಡಿಯುವ ಕೈಗಳಿಗೆ ಉದ್ಯೋಗ ನೀಡುತ್ತಿದೆ. ಅಲ್ಲದೇ, ವಿವಿಧ ಇಲಾಖೆಯ ಹಲವು ಯೋಜನೆಗಳಡಿ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಗ್ರಾಮೀಣ ಭಾಗದ ಜನರು ವಲಸೆ ಹೋಗದಿರುವುದೇ ಸೂಕ್ತ. ಸ್ವಗ್ರಾಮದಲ್ಲಿಯೇ ನೆಲಸಿ, ಕುಟುಂಬದವರೊಂದಿಗೆ ಉದ್ಯೋಗ ನಿರ್ವಹಿಸಿದಲ್ಲಿ ಗ್ರಾಮದ ಅಭಿವೃದ್ಧಿ ಜೊತೆಗೆ ಕುಟುಂಬವು ಆರ್ಥಿಕವಾಗಿ ಸದೃಢವಾಗುತ್ತದೆ’ ಎಂದು ಹೇಳಿದರು.

‘ಗ್ರಾಮೀಣ ಭಾಗದಲ್ಲಿ ನರೇಗಾ ಯೋಜನೆಯಡಿ ವೈಯಕ್ತಿಕ ಮತ್ತು ಸಮುದಾಯ ಆಧಾರಿತ ಕಾಮಗಾರಿಗಳ ಅನುಷ್ಠಾನಗೊಳಿಸುವ ಮೂಲಕ ಶಾಶ್ವತ ಕೆಲಸಗಳನ್ನು ಮಾಡಲಾಗುತ್ತಿದೆ. ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ, ಗ್ರಾಮಗಳ ಸ್ವಚ್ಛತೆಗಾಗಿ ಚರಂಡಿ, ಸ್ನಾನ ಗೃಹ ಹಾಗೂ ಶೌಚಾಲಯ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ರಾಷ್ಟ್ರೀಯ ಜೈವಿಕ ಅನಿಲ ಯೋಜನೆಯಡಿ ಗೋಬರ್ ಗ್ಯಾಸ್ ಸೌಲಭ್ಯ ಒದಗಿಸಲಾಗುತ್ತಿದೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT