ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗದಗ ಜಿಲ್ಲೆಯಲ್ಲಿ ಹತ್ತು ಮಂದಿ ಶಿಕ್ಷಕರಿಗೆ‌ ಕೋವಿಡ್ ದೃಢ

Last Updated 2 ಜನವರಿ 2021, 11:50 IST
ಅಕ್ಷರ ಗಾತ್ರ

ಗದಗ:ಜಿಲ್ಲೆಯ ಹತ್ತು ಮಂದಿ ಶಿಕ್ಷಕರಿಗೆ ಕೋವಿಡ್- 19 ದೃಢಪಟ್ಟಿದೆ.

ಗದಗ ನಗರದಲ್ಲಿರುವ ಲೊಯೊಲಾ ಪ್ರಾಥಮಿಕ ಮತ್ತು ಪ್ರೌಢಶಾಲೆ, ಸೇಂಟ್ ಜಾನ್ಸ್ ಪ್ರಾಥಮಿಕ ‌ಮತ್ತು ಪ್ರೌಢಶಾಲೆ, ಸಿ.ಎಸ್.ಪಾಟೀಲ ಪ್ರೌಢಶಾಲೆ ಮತ್ತು ಮಾಡೆಲ್ ಪ್ರಾಥಮಿಕ ಶಾಲೆಯ ಒಟ್ಟು ಒಂಬತ್ತು ಶಿಕ್ಷಕರಿಗೆ ಕೋವಿಡ್-19 ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ.

ಶನಿವಾರ ನರಗುಂದ ತಾಲ್ಲೂಕಿನ ಜಗಾಪೂರ ಗ್ರಾಮದ ಪ್ರೌಢಶಾಲೆಯ ಶಿಕ್ಷಕರಿಗೆ ಪಾಸಿಟಿವ್ ಬಂದಿದ್ದು, ಶಾಲೆಯನ್ನು ಬಂದ್ ಮಾಡಿ, ಎಲ್ಲರನ್ನೂ ಕ್ವಾರಂಟೈನ್ ಮಾಡಲಾಗಿದೆ.

ಜಿಲ್ಲೆಯಾದ್ಯಂತ 6665 ಶಿಕ್ಷಕರನ್ನು ಕೋವಿಡ್ ಟೆಸ್ಟ್ ಗೆ ಒಳಪಡೆಸಲಾಗಿದ್ದು, ಈ ಪೈಕಿ 10 ಮಂದಿ ಶಿಕ್ಷಕರಿಗೆ ಕೋವಿಡ್19 ದೃಢವಾಗಿದೆ ಎಂದು ಗದಗ ಜಿಲ್ಲೆಯ ಡಿಡಿಪಿಐ ಬಸವಲಿಂಗಪ್ಪ ಜಿ.ಎಂ.ತಿಳಿಸಿದ್ದಾರೆ.

ನರಗುಂದ ತಾಲ್ಲೂಕಿನ ಜಗಾಪುರ ಸರ್ಕಾರಿ ಪ್ರೌಢ ಶಾಲೆಯನ್ನು ಶನಿವಾರದಿಂದ ಏಳು ದಿನ ಶಾಲೆ ಬಂದ್ ಮಾಡಲಾಗಿದೆ. ಈ ಶಿಕ್ಷಕರನ್ನು 14 ದಿನಗಳ ಕಾಲ ಹೋಂ ಕ್ವಾರಂಟೈನ್, ಇವರ ಪ್ರಾಥಮಿಕ ಸಂಪರ್ಕ ಹೊಂದಿದ್ದ 7 ಜನ ಶಿಕ್ಷಕರನ್ನು ಹೊಂ ಕ್ವಾರಂಟೈನ್ಗೆ ಸೂಚಿಸಲಾಗಿದೆ. ಡಿಡಿಪಿಐ ಬಸಲಿಂಗಪ್ಪ ಶನಿವಾರ ಜಗಾಪುರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ‌. ಎಲ್ಲ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಶ್ವರಿ ಕುಡಚಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT