ಶನಿವಾರ, ಅಕ್ಟೋಬರ್ 24, 2020
24 °C

ನಾಲ್ಕು ದಿನಗಳ ನಂತರ ಪತ್ತೆಯಾದ ರೈತನ ಮೃತ ದೇಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನರಗುಂದ: ತಾಲ್ಲೂಕಿನ ಕೊಣ್ಣೂರು ಬಳಿಯ ಬಾದಾಮಿ ತಾಲ್ಲೂಕಿನ ಗೋವನಕೊಪ್ಪ ವ್ಯಾಪ್ತಿಯ ಮಲಪ್ರಭಾ ಹಳೆಸೇತುವೆ ಮೇಲಿನ ಪ್ರವಾಹಕ್ಕೆ ಭಾನುವಾರ ಕೊಚ್ಚಿಹೋಗಿದ್ದ ಕೊಣ್ಣೂರಿನ ರೈತ ವೆಂಕನಗೌಡ ಸಾಲಿಗೌಡ್ರ ಅವರ ಮೃತ ದೇಹ ಬುಧವಾರ ಸಂಜೆ ಪತ್ತೆಯಾಗಿದೆ.

ನಾಲ್ಕು ದಿನಗಳಿಂದ ಬಾದಾಮಿ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿದ್ದರೂ ಅವರ ದೇಹ ಪತ್ತೆಯಾಗಿರಲಿಲ್ಲ. ಇದರಿಂದಾಗಿ ಕುಟುಂಬದವರೂ ತೀವ್ರ ಆತಂಕಕ್ಕೆ ಒಳಗಾಗಿದ್ದರು.

ಕೊಣ್ಣೂರು ಗ್ರಾಮದ ಈಜುಗಾರರಾದ ಹಸನ್‍ಸಾಬ್ ನದಾಫ್, ಮೈಬುಸಾಬ್ ನದಾಫ್, ಸಯ್ಯದ್ ಸಾಬ ನದಾಫ್, ಶರೀಫ ಸಾಹೇಬ ನದಾಫ್ ಸೇರಿ  ಬೂದಿಹಾಳ ಸಮೀಪದ ಹೊಳೆಯ ಪಕ್ಕ ಕಂಟಿಯಲ್ಲಿ ಸಿಕ್ಕಿ ಹಾಕಿಕೊಂಡಿದ್ದ ಅವರ ಮೃತ ದೇಹವನ್ನು ಪತ್ತೆಹಚ್ಚಿದರು.

ಈ ಮಾಹಿತಿಯನ್ನು ಬಳಿಕ ಬಾದಾಮಿ ಅಗ್ನಿ ಶಾಮಕಕ್ಕೆ ತಿಳಿಸಲಾಯಿತು. ಅಗ್ನಿಶಾಮಕ ದಳದವರು ಬೋಟ್ ಮೂಲಕ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ತೆಗೆದುಕೊಂಡು ಬಂದಿದ್ದಾರೆ ಎಂದು ಮೃತ ರೈತನ ಸಹೋದರ ಸಂತೋಷ ಸಾಲಿಗೌಡ್ರ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು