ಗಜೇಂದ್ರಗಡ ಸಮೀಪದ ಜಿಗೇರಿ ಕೆರೆಯಲ್ಲಿ ಈಚೆಗೆ ಸುರಿದ ಮಳೆಯಿಂದ ನೀರು ಸಂಗ್ರಹವಾಗಿರುವುದು
ಗಜೇಂದ್ರಗಡ ಭಾಗದ ಕೆರೆಗಳ ಸರ್ವೆ (ಹದ್ದಬಸ್ತು) ಮಾಡಿ ನಿಖರ ವಿಸ್ತೀರ್ಣದ ಕುರಿತು ಮಾಹಿತಿ ನೀಡುವಂತೆ ಕಂದಾಯ ಇಲಾಖೆಗೆ ಸೂಚಿಸಲಾಗಿದೆ. ಕೃಷ್ಣಾ ಬಿ ಸ್ಕೀಂ ಯೋಜನೆ ಅಡಿಯಲ್ಲಿ ₹ 112 ಕೋಟಿ ವೆಚ್ಚದಲ್ಲಿ ಗಜೇಂದ್ರಗಡ ಭಾಗದ ಕೆರೆಗಳನ್ನು ತುಂಬಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿ ಸರ್ಕಾರದ ಮಟ್ಟದಲ್ಲಿ ಅನುಮೋದನೆ ಹಂತದಲ್ಲಿದೆ. ಅಲ್ಲದೆ ₹ 40 ಕೋಟಿ ವೆಚ್ಚದಲ್ಲಿ ನರೇಗಲ್ ಭಾಗದ ತೋಟಗಂಟಿ ಕೋಚಲಾಪುರ ಅಬ್ಬಿಗೇರಿ ಭಾಗದ ಕೆರೆಗಳಿಗೆ ಕಾಲುವೆ ಮೂಲಕ ಮಲಪ್ರಭಾ ನದಿ ನೀರು ಹರಿಸಿ ತುಂಬಿಸುವ ಯೋಜನೆಗೆ ಅನುಮೋದನೆ ದೊರೆತಿದೆ. ಶೀಘ್ರದಲ್ಲಿಯೇ ಗಜೇಂದ್ರಗಡ ತಾಲ್ಲೂಕಿನ ಕೆರೆಗಳನ್ನು ತುಂಬಿಸಲು ಕ್ರಮ ಕೈಗೊಳ್ಳಲಾಗುವುದು.
–ಜಿ.ಎಸ್. ಪಾಟೀಲ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ರೋಣ.