ಶಾಸಕರಿಗೆ ಪೊಲೀಸ್ ಇಲಾಖೆಯಿಂದ ಧನ್ಯವಾದ
‘1.6 ಕಿಲೋಮೀಟರ್ ರಸ್ತೆ ನಿರ್ಮಾಣಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ₹1 ಕೋಟಿ ಹಾಗೂ ಸ್ಥಳೀಯ ಶಾಸಕರ ಪ್ರದೇಶ ಅಭಿವೃದ್ಧಿ ಅನುದಾನದಲ್ಲಿ ₹50 ಲಕ್ಷ ನೀಡುವ ಮೂಲಕ ರಸ್ತೆ ನಿರ್ಮಾಣಕ್ಕೆ ಸಚಿವ ಎಚ್.ಕೆ.ಪಾಟೀಲ ಅವರು ಅನುದಾನ ಒದಗಿಸಿದ್ದಾರೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ ಹೇಳಿದರು. ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ರೋಣ ಶಾಸಕ ಜಿ.ಎಸ್.ಪಾಟೀಲ ಅವರು ನಿಗಮದಿಂದ ಒಂದು ವಾಹನ ನೀಡಿದ್ದಾರೆ. ಅದೇರೀತಿ ಶಾಸಕರ ಪ್ರದೇಶ ಅಭಿವೃದ್ಧಿ ಅನುದಾನದ ಅಡಿ ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಅವರು ಇಲಾಖೆಗೆ ಒಂದು ವಾಹನ ಒದಗಿಸಿದ್ದಾರೆ’ ಎಂದು ಧನ್ಯವಾದ ಸಲ್ಲಿಸಿದರು.