ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋಣ: ‘ಥರ್ಡ್‌ ಐ’ ಮಾರ್ಚ್‌ 1ರಿಂದ ಕಾರ್ಯಾಚರಣೆ

Published 28 ಫೆಬ್ರುವರಿ 2024, 6:20 IST
Last Updated 28 ಫೆಬ್ರುವರಿ 2024, 6:20 IST
ಅಕ್ಷರ ಗಾತ್ರ

ರೋಣ: ನಗರದಲ್ಲಿ ಸುಗಮ ಮತ್ತು ಸುರಕ್ಷಿತ ಸಂಚಾರ ವ್ಯವಸ್ಥೆಗೆ ‘ಥರ್ಡ್‌ ಐ’ ತಂತ್ರಜ್ಞಾನ ಮಾರ್ಚ್ 1 ರಿಂದ ಜಾರಿಗೆ ಬರಲಿದೆ ಎಂದು ರೋಣ ಪೊಲೀಸರು ತಿಳಿಸಿದ್ದಾರೆ.

ರಸ್ತೆ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿಗಾಗಿ ರಾಜ್ಯದಲ್ಲಿ ಇತ್ತೀಚೆಗೆ ಪರಿಚಯಿಸಲ್ಪಟ್ಟ ಸಿಸಿಟಿವಿ ಕ್ಯಾಮರಾ ಆಧಾರಿತ ನೂತನ ತಂತ್ರಜ್ಞಾನ ವ್ಯವಸ್ಥೆ ‘ಥರ್ಡ್‌ ಐ’ಯನ್ನು ರೋಣ ನಗರದ ಪ್ರಮುಖ ಸ್ಥಳಗಳಲ್ಲಿ ಈಗಾಗಳೇ ಅಳವಡಿಸಿದ್ದು, ಇನ್ನು ಮುಂದೆ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರ ಮೇಲೆ ಇಲಾಖೆ ಹದ್ದಿನ ಕಣ್ಣಿಡಲಿದೆ ಎಂದು ಹೇಳಿದ್ದಾರೆ.

‘ಥರ್ಡ್‌ ಐ’ ಜಾರಿ ಪೂರ್ವದಲ್ಲಿ ಇಲಾಖೆಯು ಸಾರ್ವಜನಿಕರಿಗೆ ಈ ಕುರಿತು ಜಾಗೃತಿ ಮೂಡಿಸಿದ್ದು, ನಗರದಲ್ಲಿ ಸಂಚರಿಸುವ ಎಲ್ಲ ವಾಹನ ಸವಾರರು ರಸ್ತೆ ಸಂಚಾರ ನಿಯಮಗಳಾದ ಹೆಲ್ಮೆಟ್ ಧರಿಸುವುದು, ಸೀಟ್ ಬೆಲ್ಟ್ ಧರಿಸುವುದು, ಟ್ರಿಪಲ್ ರೈಡಿಂಗ್ ನಿಷೇಧ, ಮೊಬೈಲ್ ಫೋನ್ ಮೂಲಕ ಮಾತನಾಡುತ್ತ ವಾಹನ ಚಲಾಯಿಸದಿರುವುದು ಸೇರಿದಂತೆ ವಿವಿಧ ನಿಯಮಗಳನ್ನು‌ ಕಡ್ಡಾಯವಾಗಿ‌ ಪಾಲಿಸಬೇಕು. ಒಂದು ವೇಳೆ ನಿಯಮಗಳನ್ನು ಉಲ್ಲಂಘಿಸಿದಲ್ಲಿ ದಂಡ ಭರಿಸಲು ನೋಟಿಸ್ ನೀಡಿ ದಂಡ ಕಟ್ಟಿಸಲಾಗುವುದು ಎಂದು ರೋಣ ನಗರ ಮತ್ತು ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರಿಗೆ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT