ಮಂಗಳವಾರ, ಏಪ್ರಿಲ್ 7, 2020
19 °C

ತೋಂಟದಾರ್ಯ ಜಾತ್ರಾ ಮಹೋತ್ಸವ ರದ್ದು: ಸಿದ್ಧರಾಮ ಶ್ರೀ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗದಗ: ಕೊರೊನಾ ಸೋಂಕು ಹರಡುವ ಹಿನ್ನೆಲೆಯಲ್ಲಿ ಅಂದಾಜು 5 ಶತಮಾನಗಳಿಂದ ನಡೆದುಕೊಂಡು ಬಂದಿರುವ ಎಡೆಯೂರು ತೋಂಟದ ಸಿದ್ಧಲಿಂಗ ಶಿವಯೋಗಿಗಳ ಜಾತ್ರಾ ಮಹೋತ್ಸವವವನ್ನು ಈ ಬಾರಿ ರದ್ದುಗೊಳಿಸಲಾಗಿದೆ ಎಂದು ಗದುಗಿನ ತೋಂಟದಾರ್ಯ ಮಠದ ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದ್ದಾರೆ.

‘ಕೊರೊನಾ ಸೋಂಕು ಇಂದು ಜಗತ್ತನ್ನು ತಲ್ಲಣಗೊಳಿಸಿದೆ. ಇದು ಭೀಕರ ಸಾಂಕ್ರಾಮಿಕ ರೋಗವಾಗಿದೆ. ದೇಶದಾದ್ಯಂತ ಈ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜನರು ಗುಂಪು ಕೂಡುವುದನ್ನು ಸರ್ಕಾರ ನಿಷೇಧಿಸಿವೆ. ಜನರು ಜಾತ್ರಾ ಮಹೋತ್ಸವದಲ್ಲಿ ಗುಂಪುಗೂಡಬಾರದು, ಈ ಸೋಂಕು ಜನರಿಗೆ ಹರಡಬಾರದು ಎಂಬ ಕಾರಣಕ್ಕೆ ರಥೋತ್ಸವ ಸೇರಿ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ’ ಎಂದು ಶ್ರೀಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸಕ್ತ ವರ್ಷದ ರಥೋತ್ಸವ ಕಾರ್ಯಕ್ರಮಗಳು ಏಪ್ರೀಲ್ 7ರಿಂದ 10ರ ವರೆಗೆ ನಿಗದಿಯಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು