ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಕ್ಷ್ಮೇಶ್ವರದಲ್ಲಿ ಸಂಚಾರ ನಿಯಮ ಜಾಗೃತಿ

Published 2 ಮಾರ್ಚ್ 2024, 15:52 IST
Last Updated 2 ಮಾರ್ಚ್ 2024, 15:52 IST
ಅಕ್ಷರ ಗಾತ್ರ

ಲಕ್ಷ್ಮೇಶ್ವರ: ‘ಲಕ್ಷ್ಮೇಶ್ವರ ಸೇರಿದಂತೆ ತಾಲ್ಲೂಕಿನ ಹಳ್ಳಿಗಳಲ್ಲಿ ಜನರು ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದು ಪಿಎಸ್‍ಐ ಈರಪ್ಪ ರಿತ್ತಿ ಹೇಳಿದರು.

ಈ ಕುರಿತು ಶುಕ್ರವಾರ ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಜಾಗೃತಿ ಸಭೆ ನಡೆಸಿ ಅವರು ಮಾತನಾಡಿದರು.

‘ಇನ್ನು ಮುಂದೆ ಲಕ್ಷ್ಮೇಶ್ವರದ ಶಿಗ್ಲಿ ನಾಕಾದಿಂದ ಹಾವಳಿ ಹನುಮಪ್ಪನ ದೇವಸ್ಥಾನದವರೆಗೆ ಬೈಕ್ ಹಾಗೂ ತಳ್ಳು ಗಾಡಿಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುವಂತಿಲ್ಲ. ಶನಿವಾರ, ಸೋಮವಾರ, ಬುಧವಾರ ಪೂರ್ವ ದಿಕ್ಕು ಭಾನುವಾರ, ಮಂಗಳವಾರ ಮತ್ತು ಗುರುವಾರ ಈ ನಿಯಮ ತಳ್ಳುವ ಗಾಡಿ ವ್ಯಾಪಾರಸ್ಥರಿಗೂ ಅನ್ವಯಿಸುತ್ತದೆ’ ಎಂದು ಹೇಳಿದ ಅವರು ‘ಇಲಾಖೆಯ ನಿಯಮಗಳನ್ನು ಪಾಲಿಸದವರಿಗೆ ದಂಡ ವಿಧಿಸಲಾಗುವುದು’ ಎಂದರು.

ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಎಚ್. ಮಹೇಶ, ಬಸಣ್ಣ ನಂದೆಣ್ಣವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT