ಗದಗ: ಹೆದ್ದಾರಿಯಲ್ಲಿ ನಿಂತಿದ್ದ ಟ್ರಕ್‌ಗೆ ಕ್ಯಾಂಟರ್ ಒಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮವಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ರಾತ್ರಿ ನಡೆದಿದೆ.
ನಗರದ ಹೊರವಲಯದಲ್ಲಿರುವ ಹೊಸಪೇಟೆ- ಹುಬ್ಬಳ್ಳಿ ಬೈಪಾಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಕಬ್ಬಿಣದ ಸರಳುಗಳನ್ನು ಹೊತ್ತು ಧಾರವಾಡಕ್ಕೆ ಹೊರಟಿದ್ದ 14 ಚಕ್ರದ ಟ್ರಕ್‌ನ ಟಯರ್ ಬ್ಲಾಸ್ಟ್ ಆಗಿ ಬುಧವಾರ ರಾತ್ರಿ ರಸ್ತೆಯಲ್ಲಿ ನಿಂತಿತ್ತು. ಈ ವೇಳೆ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಕ್ಯಾಂಟರ್‌ಗೆ ಹಿಂಬದಿಯಿಂದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಅನಂತಪುರ ಜಿಲ್ಲೆ ಕಾವಲಪಲ್ಲಿ ಗ್ರಾಮದ ಚಾಲಕ ರಾಜು ಸ್ಥಳದಲ್ಲೇ ಮೃತಪಟ್ಟಿದ್ದು, ಕ್ಲೀನರ್ ರಘು ಗಾಯಗೊಂಡಿದ್ದಾರೆ.
ಕ್ಯಾಂಟರ್ ಒಳಗೆ ಸಿಲುಕಿದ್ದ ಚಾಲಕ ರಾಜು ಅವರ ಮೃತದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ನೆರವಿನಿಂದ ಪೊಲೀಸರು ಹೊರತೆಗೆದರು. ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.