ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗದಗ ನಗರದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ರೋಡ್ ಶೋ

Last Updated 16 ಮಾರ್ಚ್ 2023, 12:28 IST
ಅಕ್ಷರ ಗಾತ್ರ

ಗದಗ: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಅಂಗವಾಗಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ನಗರದಲ್ಲಿ ಗುರುವಾರ ಬೃಹತ್ ರೋಡ್ ಶೋ ನಡೆಸಿದರು.

ನಗರದ ಮುಳಗುಂದ ನಾಕಾದಿಂದ ಆರಂಭವಾದ ರೋಡ್ ಶೋ ರಾಚೋಟೇಶ್ವರ ದೇವಸ್ಥಾನ ರಸ್ತೆ, ಬಸವೇಶ್ವರ ಸರ್ಕಲ್, ಸ್ಟೇಷನ್ ರಸ್ತೆ, ಮಹೇಂದ್ರಕರ್ ಸರ್ಕಲ್ ಮಾರ್ಗವಾಗಿ ಸಾಗಿತು.

ರೋಡ್ ಶೋನಲ್ಲಿ ಸಚಿವರಾದ ಸಿ.ಸಿ. ಪಾಟೀಲ, ಗೋವಿಂದ ಕಾರಜೋಳ, ಸಂಸದ ಶಿವಕುಮಾರ್ ಉದಾಸಿ, ಮುಖಂಡ ಅನಿಲ‌ಮೆಣಸಿನಕಾಯಿ, ಸೇರಿ ಹಲವಾರು ನಾಯಕರು ಭಾಗಿಯಾಗಿದ್ದರು.

ರೋಡ್ ಶೋನಲ್ಲಿ ನೂರಾರು ಬೈಕ್ ಗಳು, ಆಟೊ ರ್ಯಾಲಿ ನಡೆಯಿತು.

ಮೆರವಣಿಗೆಯುದ್ದಕ್ಕೂ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಜಯಕಾರ ಕೂಗಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT