ರೋಣ: ‘ಸಾರ್ವಜನಿಕರಿಗೆ ಸಂವಿಧಾನದ ಹಕ್ಕು ಮತ್ತು ಕಾಯ್ದೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ತಾಲ್ಲೂಕು ಮಟ್ಟ ಹಾಗೂ ಪ್ರತಿ ಹೋಬಳಿಗಳಲ್ಲಿ ಅರಿವು ಕಾರ್ಯಗಾರ ನಡೆಸಲಾಗುವುದು’ ಎಂದು ತಹಶೀಲ್ದಾರ್ ನಾಗರಾಜ.ಕೆ ತಿಳಿಸಿದರು.

ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಅರಿವು ಕಾರ್ಯಗಾರ ಆಯೋಜನೆ ಕುರಿತು ಬುಧವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ತಾಲ್ಲೂಕಿನ ಬಿ.ಎಸ್.ಬೇಲೇರಿ ಗ್ರಾಮದಲ್ಲಿ ಡಿ.23ರಂದು ಹಾಗೂ ಅಬ್ಬಿಗೇರಿ ಗ್ರಾಮದಲ್ಲಿ ಡಿ.30ರಂದು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಸರ್ಕಾರ ಹಾಕಿಕೊಂಡಿರುವ ವಿವಿಧ ಯೋಜನೆ ಕುರಿತು ಫಲಕ ಅಳವಡಿಕೆ ಹಾಗೂ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರ, ಪಿಎಸ್ಐ ಪ್ರಕಾಶ ಬಣಕಾರ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಗೀತಾ ಆಲೂರ ಮುಖಂಡರು ಇದ್ದರು.

ಅರಿವು ಕಾರ್ಯಾಗಾರದಲ್ಲಿ ಎಲ್ಲ ಇಲಾಖೆ ಅಧಿಕಾರಿಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು.
–ನಾಗರಾಜ.ಕೆ ತಹಶೀಲ್ದಾರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.