ನರಗುಂದ: ‘ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ತಾಲ್ಲೂಕು ಘಟಕದ ಅಧ್ಯಕ್ಷರ, ಕಾರ್ಯನಿರ್ವಾಹಕ ಸಮಿತಿ ಸದಸ್ಯರ ಚುನಾವಣೆ ಪ್ರಕ್ರಿಯೆ ನಡೆಸಲು ಸಹಾಯಕ ಚುನಾವಣಾಧಿಕಾರಿಯನ್ನಾಗಿ ಪಟ್ಟಣದ ವಕೀಲ ಎಸ್.ಆರ್.ಪಾಟೀಲ ಅವರನ್ನು ನೇಮಕ ಮಾಡಲಾಗಿದೆ’ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯ ಚುನಾವಣಾಧಿಕಾರಿ ಎಚ್. ಎಂ.ರೇಣುಕ ಪ್ರಸನ್ ತಿಳಿಸಿದ್ದಾರೆ.

ತಾಲ್ಲೂಕು ಘಟಕದ ಅಧ್ಯಕ್ಷರು ಮತ್ತು 20 ಜನ ಕಾರ್ಯನಿರ್ವಾಹಕ ಸಮಿತಿ ಸದಸ್ಯರ ಆಯ್ಕೆಗಾಗಿ ಮೇ 24ರಂದು ಚುನಾವಣೆ ನಡೆಯಲಿದೆ. ಇದರಲ್ಲಿ 13 ಪುರುಷರು ಹಾಗೂ 7 ಮಹಿಳೆಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಏ.29 ರಿಂದ ಬೆಳಿಗ್ಗೆ 10.30ರಿಂದ ಮೇ 6 ಮಧ್ಯಾಹ್ನ 3ರವರೆಗೆ ನಾಮಪತ್ರ ಸ್ವೀಕಾರ ನಡೆಯುತ್ತದೆ. ಮೇ 7 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಮೇ 10 ಕೊನೆಯ ದಿನವಾಗಿದೆ. ಮೇ 24ರಂದು ಬೆಳಿಗ್ಗೆ 8 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ. ನಂತರ ಮತ ಏಣಿಕೆ ಕಾರ್ಯ ನಡೆಸಲಾಗುವುದು ಎಂದು ಸಹಾಯಕ ಚುನಾವಣಾಧಿಕಾರಿ ಎಸ್.ಆರ್.ಪಾಟೀಲ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-23-431578779

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.