ಗದಗ: ‘ಎಲ್ಲಿ ಶ್ರಮದ ಬೆವರಹನಿ ಇದೆಯೋ ಅಲ್ಲಿ ನಾನಿದ್ದೇನೆ ಎಂದು ವಿಶ್ವಕರ್ಮರು ಹೇಳುತ್ತಾರೆ. ವಿಶ್ವಕರ್ಮರು ಶ್ರಮಜೀವಿಗಳು, ಕಾಯಕಯೋಗಿಗಳು’ ಎಂದು ಹಿರಿಯ ಸಾಹಿತಿ ಡಿ.ವಿ. ಬಡಿಗೇರ ಹೇಳಿದರು.

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಬುಧವಾರ ನಡೆದ ವಿಶ್ವಕರ್ಮ ಜಯಂತ್ಯುತ್ಸವದಲ್ಲಿ ಉಪನ್ಯಾಸ ನೀಡಿದರು.

‘ವೇದ, ಪುರಾಣ, ಸರ್ವಜ್ಞರ ವಚನಗಳಲ್ಲಿ ಕೂಡ ವಿಶ್ವಕರ್ಮರ ಪ್ರಾಮುಖ್ಯತೆ ಬಗ್ಗೆ ಉಲ್ಲೇಖಿಸಲಾಗಿದೆ. ವಿಶ್ವಕರ್ಮನಿಲ್ಲದ ಜಗತ್ತು ಶೂನ್ಯ. ಸಕಲ ವಿದ್ಯೆಗಳು ವಿಶ್ವಕರ್ಮನಿಂದಲೇ ಬಂದಿವೆ. ವಿಶ್ವಕರ್ಮನಿಲ್ಲದಿದ್ದರೆ ಜಗತ್ತಿನ ಅಸ್ತಿತ್ವ ಇರುತ್ತಿರಲಿಲ್ಲ ಎಂದು ಸಂತ ಕವಿ ವೇಮನರು ತಿಳಿಸಿದ್ದಾರೆ’ ಎಂದರು.

‘ವಿಶ್ವಕರ್ಮರ ಪೂಜೆ ಈ ಮೊದಲು ಸಮಾಜದ ವ್ಯಕ್ತಿಗಳ ಮನೆಗಳಿಗೆ ಸೀಮಿತವಾಗಿತ್ತು. ಆದರೆ, ಈಗ ರಾಜ್ಯ ಸರ್ಕಾರದ ಅದೇಶದನ್ವಯ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸುತ್ತಿರುವುದು ಶ್ಲಾಘನೀಯ’ ಎಂದರು.

ಇದೇ ಸಂದರ್ಭದಲ್ಲಿ ಕವಿ, ಸಾಹಿತಿ ಗೋಪಾಲ ಬಡಿಗೇರ ಅವರು ರಚಿಸಿದ ‘ಶ್ರೀ ವಿಶ್ವಕರ್ಮ ಸ್ತುತಿಮಾಲಾ’ ಪುಸ್ತಕವನ್ನು ಲೋಕಾರ್ಪಣೆಗೊಂಡಿತು.

ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು.

ವಿಶ್ವಕರ್ಮ ಸಮಾಜದ ಅಧ್ಯಕ್ಷ ದೇವೇಂದ್ರಪ್ಪ ಬಡಿಗೇರ, ವಿಶ್ವಕರ್ಮ ನೌಕರರ ಸಂಘದ ಅಧ್ಯಕ್ಷ ಆರ್.ಡಿ. ಕಡ್ಲಿಕೊಪ್ಪ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಕಾರ್ಮಿಕ ಇಲಾಖೆಯ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಆರ್.ಎಸ್. ಬುರುಡಿ, ವಾರ್ತಾಧಿಕಾರಿ ವಸಂತ ಮಡ್ಲೂರ, ಶ್ರೀಧರ್ ಚಿನಗಡಿ, ಹರಿನಾಥಬಾಬು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ವಿಶ್ವಕರ್ಮ ಸಮುದಾಯದ ಹಿರಿಯರು ಇದ್ದರು.

ಪ್ರಸಾದ್ ಸುತಾರ ತಂಡದವರು ನಾಡಗೀತೆ ಪ್ರಸ್ತುತಪಡಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಬಳ್ಳಾರಿ ಸ್ವಾಗತಿಸಿದರು. ವಿಶ್ವನಾಥ ಕಮ್ಮಾರ ನಿರೂಪಿಸಿದರು.

ವಿಶ್ವಕರ್ಮರ ಕೊಡುಗೆ ಅಪಾರ: ಎಡಿಸಿ

‘ದೇಶಕ್ಕೆ ವಿಶ್ವಕರ್ಮರ ಕೊಡುಗೆ ಅಪಾರವಾಗಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಹೇಳಿದರು.

‘ಭಾರತೀಯ ಸಂಸ್ಕೃತಿಯನ್ನು ಬೆಳೆಸಿದವರು ವಿಶ್ವಕರ್ಮರು. ದೇಶದಲ್ಲಿ ವಿವಿಧ ಐತಿಹಾಸಿಕ ದೇವಾಲಯಗಳನ್ನು ನಿರ್ಮಾಣ ಮಾಡಿದ ಹಿರಿಮೆ ವಿಶ್ವಕರ್ಮರಿಗೆ ಸಲ್ಲುತ್ತದೆ. ಶ್ರಮ ಹಾಗೂ ಕಾಯಕ ನಿಷ್ಟೆ ಇನ್ನೊಂದು ಹೆಸರೇ ವಿಶ್ವಕರ್ಮರು’ ಎಂದರು.

‘ವಿಶ್ವಕರ್ಮ ಇಲ್ಲದಿದ್ದರೆ ಈ ಜಗತ್ತಿಗೆ ಅಸ್ತಿತ್ವವೇ ಇರುತ್ತಿರಲಿಲ್ಲ. ಸಕಲ ವಿದ್ಯೆಗಳು ವಿಶ್ವಕರ್ಮನಿಂದಲೇ ಬಂದಿವೆ. ವೇದೋಪನಿಷತ್ಗಳು ಸಹ ವಿಶ್ವಕರ್ಮನನ್ನು ಕೊಂಡಾಡಿವೆ’ ಎಂದರು.

‘ಈಗಿನ ಮಕ್ಕಳಿಗೆ ವಿಶ್ವಕರ್ಮರ ಮಹತ್ವ ತಿಳಿಸಬೇಕು. ಸಾಹಿತ್ಯದ ಒಲವನ್ನು ಬೆಳೆಸಬೇಕು. ಎಲ್ಲರೂ ಕಾಯಕತತ್ವ ಬೆಳೆಸಿಕೊಳ್ಳಬೇಕು’ ಎಂದರು.

ಯಾವುದೇ ಸಮಾಜಕ್ಕೆ ಸಂಘಟನೆ ಬಹಳ ಮುಖ್ಯ. ವಿಶ್ವಕರ್ಮ ಸಮಾಜದವರು ಒಗ್ಗಟ್ಟಾಗಿರಬೇಕು. ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು
ಅಕ್ಬರ್ಸಾಬ ಬಬರ್ಜಿಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.