ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಡರಗಿ: ಮತ ಎಣಿಕೆ ಕಾರ್ಯ ವಿಳಂಬ

Last Updated 30 ಡಿಸೆಂಬರ್ 2020, 13:49 IST
ಅಕ್ಷರ ಗಾತ್ರ

ಮುಂಡರಗಿ: ತಾಲ್ಲೂಕಿನ 18 ಗ್ರಾಮ ಪಂಚಾಯ್ತಿಗಳ ಮತ ಎಣಿಕೆ ಕಾರ್ಯ ಬುಧವಾರ ಪಟ್ಟಣದ ಅನ್ನದಾನೀಶ್ವರ ಕಾಲೇಜು ಆವರಣದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆಯಿಂದ ಜರುಗಿತು.

ಚುನಾವಣೆಯಲ್ಲಿ ಮತ ಯಂತ್ರಗಳ ಬದಲಾಗಿ ಬ್ಯಾಲೆಟ್ ಪತ್ರಗಳನ್ನು ಬಳಸಿದ್ದರಿಂದ ಮತ ಎಣಿಕೆ ಕಾರ್ಯ ನಿಧಾನಗತಿಯಲ್ಲಿ ಜರುಗಿತು. ಮತ ಎಣಿಕೆಗೆ ನಿಯೋಜನೆಗೊಂಡಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿ ಗೊಂದಲಕ್ಕೆ ಅವಕಾಶವಿಲ್ಲದಂತೆ ಕೆಲಸ ನಿರ್ವಹಿಸಿದರು.

ಬುಧವಾರ ಸಂಜೆ ಆರು ಗಂಟೆಗೆ ಬಂದ ಮಾಹಿತಿ ಪ್ರಕಾರ ತಾಲ್ಲೂಕಿನ ಶಿಂಗಟಾಲೂರು, ಹೆಸರೂರು, ಬಾಗೇವಾಡಿ, ಬಿದರಳ್ಳಿ ಹಾಗೂ ಮತ್ತಿತರ ಶೇ 70ರಷ್ಟು ಗ್ರಾಮ ಪಂಚಾಯ್ತಿಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.

ಕಲಕೇರಿ ಗ್ರಾಮ ಪಂಚಾಯ್ತಿಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಜಯ ಪಡೆದಿದ್ದರು. ಆರು ಗಂಟೆಗೆ ಪ್ರಕಟಗೊಂಡ ಫಲಿತಾಂಶಗಳ ಪ್ರಕಾರ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಬಿಜೆಪಿ ಬೆಂಬಲಿತ 46, ಕಾಂಗ್ರೆಸ್ ಬೆಂಬಲಿತ 24 ಹಾಗೂ ಪಕ್ಷೇತರರು ಮೂರು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರು.

ಫಲಿತಾಂಶ ಪ್ರಕಟವಾಗುತ್ತಿದ್ದಂತೆ ವಿಜೇತ ಅಭ್ಯರ್ಥಿಗಳು ಹಾಗೂ ಬೆಂಬಲಿತ ಪಕ್ಷದ ಕಾರ್ಯಕರ್ತರು ಕಾಲೇಜು ಮುಂಭಾಗದಲ್ಲಿ ವಿಜಯೋತ್ಸವ ಆಚರಿಸಿದರು. ಅಭಿಮಾನಿಗಳು ಗೆದ್ದ ಅಭ್ಯರ್ಥಿಗಳಿಗೆ ಹೂಮಾಲೆ ಹಾಕಿ ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT